Satya Darshana
ಬಿಸಿ ಬಿಸಿ ಸುದ್ದಿ
ದೇಶ-ವಿದೇಶಬಿಸಿ ಬಿಸಿ ಸುದ್ದಿ

ಉತ್ತರ ಪ್ರದೇಶದ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ನಿಧನ

1991, ಜೂನ್ ತಿಂಗಳಿಂದ 1992 ಡಿಸೆಂಬರ್​ವರೆಗೆ ಮತ್ತು 1997 ಸೆಪ್ಟೆಂಬರ್​ನಿಂದ 1999 ನವೆಂಬರ್​ವರೆಗೆ ಅವರು ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಮೊದಲ ಅಧಿಕಾರಾವಧಿಯಲ್ಲಿ ಅಯೋಧ್ಯಾದ ಬಾಬ್ರೀ ಮಸೀದಿಯನ್ನು ಕರ ಸೇವಕರು ನಾಶಪಡಿಸಿದ ಘಟನೆಯೂ ನಡೆದಿತ್ತು. ಬಾಬ್ರೀ ಮಸೀದಿ ಧ್ವಂಸಗೊಂಡ ದಿನವೇ ಕಲ್ಯಾಣ್ ಸಿಂಗ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಈ ಕಾರಣದಿಂದಲೇ ಕಲ್ಯಾಣ್ ಸಿಂಗ್​ರನ್ನು ಇಂದಿಗೂ ಹಲವರು ನೆನಪಿಸಿಕೊಳ್ಳುತ್ತಾರೆ.ಕಲ್ಯಾಣ್ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹಲವು ಬಿಜೆಪಿ ನಾಯಕರು ಕಲ್ಯಾಣ್ ಸಿಂಗ್ ಅವರ ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ, ಮಾಯಾವತಿ, ಅಖಿಲೇಶ್ ಯಾದವ್ ಮತ್ತು ಹಲವು ಗಣ್ಯರು ಕಲ್ಯಾಣ್ ಸಿಂಗ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಮೂರು ದಿನ ಶೋಕಾಚರಣೆಗೆ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಆದೇಶಿಸಿದ್ದಾರೆ.

Related posts

ಸಾಮಾಜಿಕ ನ್ಯಾಯದ ಸಮರ್ಥ ಶಕ್ತಿ ಡಾ. ಬಿ.ಆರ್. ಅಂಬೇಡ್ಕರ್

satyadarshana

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಮ್ ವಾಯ್ ಮುಧೋಳ

satyadarshana

ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ದಲಿತರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ: ದಲಿತ ಯುವಕನಿಗೆ ದೊಣ್ಣೆಯಿಂದ ಢಳಿತ

satyadarshana

Leave a Comment