Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಮೇಕೆದಾಟು ಯೋಜನೆ ಜಾರಿ ಬಗ್ಗೆ ಮನವರಿಕೆ ಮಾಡಿದ್ದೇವೆ; ಶೀಘ್ರವೇ ಡಿಪಿಆರ್​ಗೆ ಮಾನ್ಯತೆ: ಬಸವರಾಜ ಬೊಮ್ಮಾಯಿ

ದೆಹಲಿ: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್​ಗೆ ಮಾನ್ಯತೆ ಸಿಗಲಿದೆ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಸಮಯ ಕೇಳಿದ್ದೇನೆ. ಅವರಿಗೆ ವೈಯಕ್ತಿಕ ಕೆಲಸವಿರುವ ಹಿನ್ನೆಲೆ ಮುಂದಿನ ವಾರ ಭೇಟಿಯಾಗಲು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಕೇಂದ್ರ ಸಚಿವರನ್ನು ಭೇಟಿಯಾದ ಬಸವರಾಜ ಬೊಮ್ಮಯಿ

ಬುಧವಾರ ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಕೃಷಿ ಸಚಿವ ತೋಮರ್ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ತೋಮರ್​ ಜೊತೆಗೆ ಸಿಎಂ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಶೋಭಾ ಕರಂದ್ಲಾಜೆ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಕಾರಜೋಳ ಉಪಸ್ಥಿತರಿದ್ದರು. ಬಳಿಕ, ಕೇಂದ್ರ ಜಲಶಕ್ತಿ ಸಚಿವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಗಜೇಂದ್ರಸಿಂಗ್​ ಶೇಖಾವತ್ ಭೇಟಿಯಾಗಿ, ಮಹದಾಯಿ, ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆಸಿದ್ದಾರೆ. ಬಳಿಕ, ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ನಾಯಕ, ಗೃಹ ಸಚಿವ ಅಮಿತ್​ ಶಾ ಭೇಟಿಯಾಗಿದ್ದಾರೆ. ದೆಹಲಿಯ ನಾರ್ತ್ ಬ್ಲಾಕ್​ನಲ್ಲಿನ ಕಚೇರಿಯಲ್ಲಿ ಅಮಿತ್ ಶಾರನ್ನು ಭೇಟಿ ಮಾಡಿದ್ದಾರೆ.

Related posts

ಈ ಮೂಲಕ ಸದ್ಭಕ್ತ ವೃಂದ ಹಾಗು ಸಂಘ-ಸಂಸ್ಥೆಗಳಿಗೆ ತಿಳಿಸುವುದೆನೆಂದರೆ ತಾವು ಕೊಪ್ಪಳ ರೈಲು ನಿಲ್ದಾಣಕ್ಕೆ “ಶ್ರೀ ಗವಿಸಿದ್ಧೇಶ್ವರ ರೈಲು ನಿಲ್ದಾಣ”

satyadarshana

ದಮನಿತ ಮಹಿಳೆಯರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ .

satyadarshana

ಲಂಚ ಪಡೆಯೋ ವೇಳೆ ACB ಬಲೆಗೆ ಬಿದ್ದ ಪಂಚಾಯತ್ ರಾಜ್ ಇಲಾಖೆ ಮುಖ್ಯ ಎಂಜಿನಿಯರ್

satyadarshana

Leave a Comment