Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿಸಿನಿಮಾ

ಪ್ರಶಾಂತ್​ ಸಂಬರಗಿಗೆ ತಿರುಗೇಟು ನೀಡಿದ ಅನುಶ್ರೀ

ಅನುಶ್ರೀ ವಿರುದ್ಧ ಬಿಗ್​ ಬಾಸ್​ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಸಾಕಷ್ಟು ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದರು. ಈ ವಿಚಾರದಲ್ಲಿ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ. ‘ಪ್ರಶಾಂತ್​ ಸಂಬರಗಿ ಅವರು ಕಾನೂನು ಮೂಲಕ ಹೋಗಲಿ. ನಮ್ಮ ಸಮಾಜದಲ್ಲಿ ಕಾನೂನು ಇದೆ. ಎಲ್ಲ ವಿಚಾರಗಳಿಗೆ ಆಗಲೂ ಉತ್ತರ ಕೊಟ್ಟಿದ್ದೇನೆ, ಈಗಲೂ ಉತ್ತರ ಕೊಡುತ್ತಿದ್ದೇನೆ’ ಎಂದಿದ್ದಾರೆ ಅನುಶ್ರೀ.

‘ನನ್ನ ಬಗ್ಗೆ ಮಾತಾಡುವ ನೂರಾರು ಜನಕ್ಕೆ ಉತ್ತರಿಸಲು ಸಾಧ್ಯವಿಲ್ಲ. ನನ್ನ ವಿರುದ್ಧ ಮಾಡುತ್ತಿರುವ ಎಲ್ಲ ಆರೋಪಗಳು ಸುಳ್ಳು. ಯಾವಾಗ ವಿಚಾರಣೆಗೆ ಕರೆದರೂ ನಾನು ಹೋಗುತ್ತೇನೆ. ಚಾರ್ಜ್​ಶೀಟ್ ಬಗ್ಗೆ ನನಗೆ ಏನೇನೂ ಗೊತ್ತಿಲ್ಲ. ಕಿಶೋರ್ ಶೆಟ್ಟಿಯನ್ನು 12 ವರ್ಷದ ಹಿಂದೆ ನೋಡಿದ್ದೆ. 13 ವರ್ಷ ಹಿಂದೆ ಅವರು ಕೊರಿಯೋಗ್ರಾಫರ್ ಆಗಿದ್ರು. ಆ ರಿಯಾಲಿಟಿ ಶೋನಲ್ಲಿ ನಾನು ವಿನ್ನರ್ ಆಗಿದ್ದೆ. ಆಗ ಪ್ರಾಕ್ಟೀಸ್​ ಮಾಡಲು ಎಲ್ಲರೂ ಒಂದೇ ಕಡೆ ಇದ್ದೆವು’ ಎಂದು ಅನುಶ್ರೀ ಕಿಶೋರ್​ ಶೆಟ್ಟಿ ಪರಿಚಯ ಆಗಿದ್ದು ಹೇಗೆ ಎಂದು ವಿವರಸಿದ್ದಾರೆ.

Related posts

ಪರಿಶಿಷ್ಟರ ಒಳ ಮೀಸಲಾತಿ: ಕೇಂದ್ರಕ್ಕೆ ಶಿಫಾರಸು ಸಾಧ್ಯತೆ

satyadarshana

ಕಾರಟಗಿ, ಕನಕಗಿರಿ, ಕುಕನೂರು, ಕೊಪ್ಪಳ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 6ರಿಂದ

satyadarshana

ಜಕ್ಕಲಿ ಗ್ರಾಮದ ದಲಿತ ಯುವಕರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಆಕ್ರೋಶ 

satyadarshana

Leave a Comment