Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅನ್ನದಾನ ಸ್ವಾಮೀಜಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯ.

ಸತ್ಯದರ್ಶನ
ಗದಗ :ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಲಿಂಗೈಕ್ಯರಾಗಿದ್ದಾರೆ.

ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠ ಹೊಸಪೇಟೆ, ಬಳ್ಳಾರಿಯ ಕೊಟ್ಟೂರು ಸ್ವಾಮಿಮಠ, ಶ್ರೀಮದ ಶಿವಯೋಗಿ ಮಂದಿರದ ಅಧ್ಯಕ್ಷರಾಗಿದ್ದರು. ಇಂದು ಸಂಜೆ ಅಥವಾ ನಾಳೆ ಹಾಲಕೆರೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಈ ಮಠ 28 ಶಾಖಾ ಮಠಗಳನ್ನು ಹೊಂದಿದೆ. ಕಳೆದ 10ರಂದು ಹಾಲಕೇರಿಯ 13ನೇ ಪೀಠಾಧಿಪತಿಯಾಗಿ ನೂತನ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅಧಿಕಾರ ವಹಿಸಿಕೊಂಡಿದ್ದರು.

ಡಾ ಸಂಗನ ಬಸವ ಮಹಾಸ್ವಾಮಿ ಲಿಂಗೈಕ್ಯ: ಇನ್ನು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಕೊಟ್ಟೂರು ಮಠ ಸಂಸ್ಥಾನದ ಜಗದ್ಗುರು ಡಾ.ಸಂಗನ ಬಸವ ಮಹಾಸ್ವಾಮಿ(87) ಸಹ ಲಿಂಗೈಕ್ಯರಾಗಿದ್ದಾರೆ. ಉತ್ತರ ಕರ್ನಾಟಕದ ಹಿರಿಯ ವೀರಶೈವ ಲಿಂಗಾಯತ ಜಗದ್ಗುರುಗಳಾಗಿದ್ದ ಡಾ.ಸಂಗನ ಬಸವ ಮಹಾಸ್ವಾಮಿ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ‌ ಅಪೋಲೊ ಅಸ್ಪತ್ರೆಯಲ್ಲಿ ದಾಖಲಾಗಿದ್ರು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.30 ಕ್ಕೆ ಲಿಂಗೈಕ್ಯರಾಗಿದ್ದಾರೆ.

ಶಿಕ್ಷಣ ಸಂಸ್ಥೆಗಳ ಮೂಲಕ ತ್ರಿವಿಧ ದಾಸೋಹಿಯಾಗಿದ್ದ ಡಾ.ಸಂಗನ ಬಸವ ಮಹಾಸ್ವಾಮಿ 2004ರಿಂದ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಶಿವಯೋಗಮಂದಿರದ ಅಧ್ಯಕ್ಷರಾಗಿದ್ದರು. ಬಸವಾದಿ ಶರಣರ ವಚನಗಳನ್ನ ನಾಡಿನಾದ್ಯಂತ ಪಸರಿಸುವ ಕಾಯಕದಲ್ಲಿ ನಿರತರಾಗಿದ್ದರು. ಹೊಸಪೇಟೆ ,ಬಳ್ಳಾರಿ, ಗದಗ ಬಾಗಲಕೋಟೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನ ಕಟ್ಟಿ ಬಡವರಿಗೆ ಅನ್ನ ಅಕ್ಷರ ದಾಸೋಹ ನೀಡುತ್ತಿದ್ದರು.

ಸಿಎಂ ಸಂತಾಪಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನ ಬಸವ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳಿಗೆ 85 ವರ್ಷ ವಯಸ್ಸಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳ ಕಾಲ ಅವರು ಕನ್ನಡ ನಾಡು, ನುಡಿ, ಲಿಂಗಾಯತ ಧರ್ಮಕ್ಕೆ ಸಲ್ಲಿಸಿದ ಸೇವೆ ಅಪಾರ. ಅವರ ನಿಧನದಿಂದ ಅಪಾರ ಭಕ್ತ ಸಮೂಹ ಅನಾಥವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಅವರ ಭಕ್ತ ಸಮೂಹಕ್ಕೆ ನೀಡಲಿ ಎಂದು ಕೋರುತ್ತೇನೆ ಎಂದಿದ್ದಾರೆ.

Related posts

ಶಿಥಿಲಾವಸ್ಥೆಯಲ್ಲಿರುವ ಶಾಲಾ, ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಿ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶೀಖಾ

satyadarshana

ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ – ರುದ್ರಣ್ಣ ಹರ್ತಿಕೋಟೆ

satyadarshana

ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ಸಮರ್ಪಕ ನೀರು ಒದಗಿಸಿ> ಸಂಸದ  ಶಿವಕುಮಾರ ಉದಾಸಿ

satyadarshana

Leave a Comment