Satya Darshana
ಬಿಸಿ ಬಿಸಿ ಸುದ್ದಿ
ದೇಶ-ವಿದೇಶಬಿಸಿ ಬಿಸಿ ಸುದ್ದಿ

ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಜತೆಗೆ ಅವರ ಸಾಧನೆಯ ಜಾಗೃತಿ ಮೂಡಿಸುವುದು ಈ ದಿನದ ವಿಶೇಷತೆ.

ಸತ್ಯ ದರ್ಶನ

ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಕಾನೂನುಗಳನ್ನು ವಿವರಿಸುವ ಕಾನೂನು ದಾಖಲೆಯ ತಯಾರಿಕೆಯಲ್ಲಿ ಪ್ರಮುಖ ಪಾತ್ರವನ್ನು ಹೊಂದಿದ್ದರಿಂದ, ಈ ಆಚರಣೆಯನ್ನು ಅವರ ಪರಂಪರೆಗೆ ಗೌರವ ಸಲ್ಲಿಸುವಂತೆಯೂ ಕಾಣಬಹುದಾಗಿದೆ.

2021: ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಶಾಲೆ-ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮುಖಾಂತರ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುವುದು ಪ್ರತಿಯೊಬ್ಬ ಶಿಕ್ಷಕರ, ಉಪನ್ಯಾಸಕರ ಕರ್ತವ್ಯ. ಇಂದಿನ ಲೇಖನದಲ್ಲಿ ಸಂವಿಧಾನ ದಿನದ ಪ್ರಾಮುಖ್ಯತೆಯ ಜತೆಗೆ ವಿದ್ಯಾರ್ಥಿಗಳು ಈ ದಿನದಂದು ಭಾಷಣ ಮಾಡಲು, ಪ್ರಬಂಧಕ್ಕೆ ಪ್ರಮುಖ ಅಂಶಗಳ ಬಗ್ಗೆ ಈ ಕೆಳಗಿನಂತೆ ತಿಳಿಸಿದ್ದೇವೆ.

1949 ರ ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಸೆಲೆಬ್ರೇಟ್ ಮಾಡುತ್ತಿದ್ದೇವೆ

ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949 ರ ನವೆಂಬರ್ 26 ರಂದೇ ಆದರೂ ಅನುಷ್ಠಾನಕ್ಕೆ ತಂದಿದ್ದು 1950 ರ ಜನವರಿ 26 ರಂದು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ.

ಭಾರತ ಸಂವಿಧಾನ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ. ಮೂಲಭೂತ ಹಕ್ಕುಗಳನ್ನು ನೀಡಿದೆ. ಕರ್ತವ್ಯಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು.

ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಜತೆಗೆ ಅವರ ಸಾಧನೆಯ ಜಾಗೃತಿ ಮೂಡಿಸುವುದು ಈ ದಿನದ ವಿಶೇಷತೆ.

ಭಾರತ ಸಂವಿಧಾನಕ್ಕೆ ಜಗತ್ತಿನಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆಯೂ ಇದೆ.

ನವೆಂಬರ್ 26 ರಂದು ಸಂವಿಧಾನ ದಿನ ಆಚರಿಸುವಂತೆ 2015 ರ ನವೆಂಬರ್ 19 ರಂದು ಭಾರತ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿತು. ಇದಕ್ಕೂ ಮೊದಲು 2015 ರ ಅಕ್ಟೋಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ರವರು ಮುಂಬೈನಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಸ್ಮಾರಕಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ನವೆಂಬರ್ 26 ರಂದು ಸಂವಿಧಾನ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿದ್ದರು.

Related posts

ಪಿಎಸ್ಐ ಸೇರಿದಂತೆ ಇಬ್ಬರು ಪೇದೆಗಳು ಲೋಕಾಯುಕ್ತ ಬಲೆಗೆ.ಹಣ ಕೊಡುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ

satyadarshana

ಸ್ಪಂದನಾ ಅಂತಿಮ ದರ್ಶನ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಗಣ್ಯರು.

satyadarshana

ಅಯೋಧ್ಯೆ ರಾಮಜನ್ಮ ಭೂಮಿ ಮಾದರಿಯಲ್ಲಿ ಸರ್ಕಾರದ ಹೊಸ ತಂತ್ರ​?

satyadarshana

Leave a Comment