Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಯಲಬುರ್ಗಾ.ಜಿಲ್ಲಾಡಳಿತ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ತೆರೆಯುವುದಕ್ಕೆ ಪಾಲಕರು ತೀವ್ರ ವಿರೋಧ..

ಸತ್ಯದರ್ಶನ ಸುದ್ದಿಮೂಲ 

ಯಲಬುರ್ಗಾ: ಪಟ್ಟಣದ ಹೊರವಲಯದ ಸಂಗನಾಳ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ತೆರೆಯುವುದಕ್ಕೆ ಪಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಸರ್ಕಾರದ ಆದೇಶದನ್ವಯ ಸ್ಥಳೀಯ ತಾಲ್ಲೂಕು ಆಡಳಿತ ಕೇಂದ್ರ ತೆರೆಯಲು ಮುಂದಾ ಗಿರುವ ಹಿನ್ನೆಲೆಯಲ್ಲಿ ಪಾಲಕರು ಹಾಗೂ ವಿವಿಧ ಸಂಘಟನೆಯ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೇರೆ ಕಡೆ ಅವಕಾಶವಿದ್ದರೂ ಮಕ್ಕಳು ಅಭ್ಯಾಸಮಾಡುತ್ತಿದ್ದ ವಸತಿ ಶಾಲೆಯಲ್ಲಿಯೇ ಕೇಂದ್ರವನ್ನು ತೆರೆಯಲು ಮುಂದಾಗಿದ್ದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದೆ. ಎರಡು ವರ್ಷಗಳಿಂದ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಹೆಚ್ಚಿನ ಅವಧಿ ಮನೆಯಲ್ಲಿಯೇ ಉಳಿಯುವಂತಾಗಿದೆ. ಮತ್ತೆ ವಸತಿ ಶಾಲೆಯಲ್ಲಿ ಕೇಂದ್ರ ತೆರೆಯುವುದರಿಂದ ಶಾಲೆ ಬಿಡಬೇಕಾಗುತ್ತದೆ. ಬೇರೆ ಶಾಲೆಗೆ ಸ್ಥಳಾಂತರಿಸಿದರೂ ಅಗತ್ಯ ಸೌಲಭ್ಯಗಳ ಕೊರತೆಯಿಂದ ಮಕ್ಕಳು ವಿವಿಧ ರೀತಿಯ ತೊಂದರೆ ಅನುಭವಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಸೋಂಕಿತರ ಆರೈಕೆ ಕೇಂದ್ರ ತೆರೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು

ತಹಶೀಲ್ದಾರ್ ಶ್ರೀಶೈಲ ತಳವಾರ ಮಾತನಾಡಿ, ಈ ಶಾಲೆಯ 6 ರಿಂದ 9ನೇ ತರಗತಿಯ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತದಿಂದ ಆದೇಶ ಇರುವುದರಿಂದ ಇದೇ ಶಾಲೆಯಲ್ಲಿ ಕೇಂದ್ರವನ್ನು ತೆರೆಯಬೇ ಕಾಗಿರುವುದರಿಂದ ಅನಿವಾರ್ಯವಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಕೋವಿಡ್ ನಿಯಂತ್ರಣ ಅಗತ್ಯವಿ ರುವುದರಿಂದಜನರು ಸಹಕರಿಸಬೇಕು. ಸರ್ಕಾರಕ್ಕೆ ಮಕ್ಕಳ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳುಮಾಡುವ ಉದ್ದೇಶವಿಲ್ಲ. ಸರ್ಕಾರದ ಕಾರ್ಯಕ್ರಮಗಳಿಗೆ ವಿರೋಧಿಸುವಂತಿಲ್ಲ. ಅಗತ್ಯಬಿದ್ದರೆ ಮಕ್ಕಳನ್ನು ಬೇರೆ ಶಾಲೆಯಲ್ಲಿ ಕಲಿಕೆಗೆ ಅನುಕೂಲ ಕಲ್ಪಿಸಲಾಗುವುದು. ಪಾಲಕರು ಪ್ರೋತ್ಸಾಹಿಸಬೇಕು ಎಂದು ಮನವರಿಕೆ ಮಾಡಿದರು.

Related posts

ನಗರ ಮತ್ತು ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡಿ: ಪಿ.ಐ.ವಿದ್ಯಾ

satyadarshana

ಬೆಂಗಳೂರು ವಿವಿ: ಹಿರಿಯ ಪ್ರಾಧ್ಯಾಪಕ, ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ ರವಿ ರವರ ಬೀಳ್ಕೊಡುಗೆ ಸಮಾರಂಭ‌

satyadarshana

ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕ ಪ್ರಮಾಣದಲ್ಲಿ ಲಭ್ಯ

satyadarshana

Leave a Comment