Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಸೇನಾನಿ ವೀರ ಯೋಧ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಲು ಆದೇಶ

ಬೆಂಗಳೂರು ,ಜ.27- ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಸೇನಾನಿ ವೀರ ಯೋಧ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು.

ನಗರದ ಮೆಜೆಸ್ಟಿಕ್‍ನಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಾಯಣ್ಣನ ಶೌರ್ಯ, ದೇಶಭಕ್ತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಅವರ ಭಾವಚಿತ್ರವನ್ನು ಅಳವಡಿಸಲಾಗುವುದು . ಇಂದೇ ಇದಕ್ಕೆ ಅದೇಶ ಹೊರಡಿಸುವುದಾಗಿ ಹೇಳಿದರು.

ಇಷ್ಟು ವರ್ಷಗಳಿಂದ ಸಂಗೊಳ್ಳಿ ರಾಯಣ್ಣನ ಸ್ಮರಣೋತ್ತರ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ರಾಯಣ್ಣ ಅವರ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ ವೀರರಾಣಿ ಕಿತ್ತೂರು ಚನ್ಮಮ್ಮ ಹಾಗೂ ರಾಯಣ್ಣನವರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುವುದು ಎಂದರು.

ಈ ಎರಡು ಪ್ರತಿಮೆಗಳನ್ನು ಮಾಡುವವರ ಜೊತೆ ಒಂದು ಸುತ್ತಿನ ಮಾತುಕತೆಯನ್ನು ನಡೆಸಲಾಗಿದೆ. ಸುವರ್ಣ ಸೌಧದ ಮುಂಭಾಗ ಕಿತ್ತೂರು ರಾಣಿ ಚನ್ನಮ್ಮ, ಬಲಗೈ ಭಂಟ ರಾಯಣ್ಣನ ಪ್ರತಿಮೆಯನ್ನು ಅನಾವರಣ ಮಾಡಿದರೆ ಹೆಚ್ಚು ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಸಾಹಸ, ಧೈರ್ಯ ಅವರ ಆದರ್ಶಗಳನ್ನು ಜೀವಂತವಿಡುವ ಕೆಲಸವನ್ನು ಸರ್ಕಾರ ಮಾಡುತ್ತದೆ. ಸುಮಾರು 180 ಕೋಟಿ ವೆಚ್ಚದಲ್ಲಿ ರಾಯಣ್ಣನ ಮಿಲಿಟರಿ ಸ್ಕೂಲ್ ನಿರ್ಮಾಣ ಮಾಡುತ್ತಿದ್ದೇವೆ. ಈಗಾಗಲೇ ಇದಕ್ಕೆ 55 ಕೋಟಿ ಅನುದಾನವನ್ನು ಸಹ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

 

Related posts

ಗದಗ ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

satyadarshana

ಮಹಾಯೋಗಿ ವೇಮನರ ತತ್ವ ಸಿದ್ದಾಂತಗಳನ್ನು ಎಲ್ಲರು ಅಳವಡಿಸಿಕೊಂಡು ಜಾಗೃತ ಸಮಾಜ ನಿರ್ಮಿಸೋಣ :ಎಚ್ ಕೆ ಪಾಟೀಲ

satyadarshana

ಮೇಕೆದಾಟು ಯೋಜನೆ ಜಾರಿ ಬಗ್ಗೆ ಮನವರಿಕೆ ಮಾಡಿದ್ದೇವೆ; ಶೀಘ್ರವೇ ಡಿಪಿಆರ್​ಗೆ ಮಾನ್ಯತೆ: ಬಸವರಾಜ ಬೊಮ್ಮಾಯಿ

satyadarshana