Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಷ್ಯಾ – ಉಕ್ರೇನ್ ಯುದ್ದ: ಮುಂಡರಗಿ ಯುವಕನ ರಕ್ಷಣೆಗೆ ಪೋಷಕರ ಆಗ್ರಹ

ಗದಗ: ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದ್ದರಿಂದ ಉಕ್ರೇನ್‌ ನಿಂದ ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತಗೊಂಡಿದೆ. ಪರಿಣಾಮ ಗದಗ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಉಕ್ರೇನ್‌ ನಲ್ಲಿ ಸಿಲಕಿದ್ದಾರೆ. ವಿಮಾನ ಸೇವೆ ಇಲ್ಲದೇ ಪರದಾಡುವಂತಾಗಿದ್ದು, ಪಾಲಕರಲ್ಲಿ ಆತಂಕ ಸೃಷ್ಟಿಸಿದೆ.
ಜಿಲ್ಲೆಯ ಮುಂಡರಗಿ ಪಟ್ಟಣದ ಮಹಾಗಣಪತಿ ಬಿಳಿಮಗ್ಗದ ಎಂಬ ವಿದ್ಯಾರ್ಥಿ ಉಕ್ರೇನ್ ದೇಶದ ಕೀವ್ ರಾಜಧಾನಿಯ ಚೆರ್ನಿವೀಸ್ ನಗರದಲ್ಲಿ ಸಿಲುಕಿದ್ದಾರೆ. ಅಲ್ಲಿನ ಚೆರ್ನಿವೀಸ್ ನ ಬೋಕೋವಿನಿಯನ್ ಸ್ಟೇಟ್ ಮೆಡಿಕಲ್ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ.
ಸದ್ಯಕ್ಕೆ ಮಹಾಗಣಪತಿ ಸುರಕ್ಷಿತವಾಗಿದ್ದಾರೆ. ಅದರಂತೆ ಸಾವಿರಾರು ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಅಲ್ಲಿನ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಭಾರತ ಸರಕಾರ ತಕ್ಷಣ ಏರ್ ಲಿಫ್ಟ್ ಮೂಲಕ ಅವರ ರಕ್ಷಿಸಬೇಕು ಎಂಬುದು ಬಿಳಿಮಗ್ಗದ ಪೋಷಕರ ಒತ್ತಾಯ.

Related posts

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ

satyadarshana

ಕೊಪ್ಪಳ ತಾಲೂಕಿನ 38 ಗ್ರಾಮ ಪಂಚಾಯತಿಗಳಲ್ಲಿ ‘ಸಹಾಯ ಮತ್ತು ಸೌಲಭ್ಯ ಕೇಂದ್ರ’ ಸ್ಥಾಪನೆ

satyadarshana

ಉತ್ತರ ಪ್ರದೇಶ: ಸಮವಸ್ತ್ರ ಧರಿಸದ ದಲಿತ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ, ಶಾಲೆಯಿಂದ ಹೊರದಬ್ಬಿದ ಗ್ರಾಮದ ಮಾಜಿ ಮುಖ್ಯಸ್ಥ

satyadarshana

Leave a Comment