Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ಮಧ್ಯೆಯೇ ಈ ಬಾರಿ ಮಾಂಸ ಮಾರಾಟ ಜೋರು..

ಬೆಂಗಳೂರು: ಯುಗಾದಿ ಹಬ್ಬದ ಹೊಸ ತೊಡಕಿನ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಾಂಸ ಮಾರಾಟ ಜೋರಾಗಿದೆ. ಮಾಂಸದ ಮಳಿಗೆಗಳಲ್ಲಿ ಜನರ ದಂಡೇ ನೆರೆದಿದೆ. ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ಮಧ್ಯೆಯೇ ಈ ಬಾರಿ ಮಾಂಸ ಮಾರಾಟ ಭರ್ಜರಿಯಾಗಿ ಸಾಗಿದೆ.

ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಧ್ಯರಾತ್ರಿಯಿಂದಲೇ ಮಾಂಸ ಮಾರಾಟ ಅಂಗಡಿಗಳಲ್ಲಿ ಸಿದ್ಧತೆ ನಡೆದಿತ್ತು. ಬೆಳಗ್ಗೆ ಮಾಂಸದಂಗಡಿಗಳತ್ತ ಜನರ ದಂಡು ಬರಲಾರಂಭಿಸಿತು. ಸರತಿ ಸಾಲಿನಲ್ಲಿ ನಿಂತು ಮಾಂಸ ಖರೀದಿಗೆ ಮುಗಿಬಿದ್ದಿರುವ ದೃಶ್ಯ ಸಾಮಾನ್ಯವಾಗಿತ್ತು.

ಬೆಂಗಳೂರಿನ ಯಶವಂತ ಮಾರುಕಟ್ಟೆ, ಮೈಸೂರಿನ ಪಾಪಣ್ಣ ಮಟನ್ ಸ್ಟಾಲ್, ಕೆ.ಜಿ.ಕೊಪ್ಪಲಿನಲ್ಲಿ ಗುಡ್ಡೆ ಮಾಂಸ ಖರೀದಿ, ತುಮಕೂರಿನ ಹಿಂದೂ ಮೀಟ್ ಮಾರ್ಟ್ ಸೇರಿದಂತೆ ವಿವಿಧ ಜಿಲ್ಲೆಯ ಪ್ರಮುಖ ಮಾರುಕಟ್ಟೆಗಳಲ್ಲಿ ಮಾಂಸ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಕೆಲ ಮಳಿಗೆಗಳಲ್ಲಿ ಹಲಾಲ್ ಕಟ್, ಜಟ್ಕಾ ಕಟ್ ಎಂಬ ಬೋರ್ಡ್‍ಗಳನ್ನೂ ಹಾಕಿದ್ದು, ಜಟ್ಕಾಕಟ್‍ಗೆ ಬೇಡಿಕೆ ಹೆಚ್ಚಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದಲೂ ನಿರಾಶೆಗೊಂಡಿದ್ದ ವ್ಯಾಪಾರಿಗಳ ಮೊಗದಲ್ಲೂ ಹರುಷ ತುಂಬಿದೆ. ಬರುವ ಗ್ರಾಹಕರಿಗೆ ಸಂತಸದಿಂದಲೇ ಮಾಂಸ ನೀಡಿ ಗಲ್ಲಾ ಪೆಟ್ಟಿಗೆ ತುಂಬಿಸಿಕೊಳ್ಳುತ್ತಿದ್ದಾರೆ.

Related posts

ಆಲಸ್ಯ ದೂರಮಾಡಿ ಉತ್ತಮ ಬದುಕು ರೂಪಿಸುವ ಶಕ್ತಿ ಪುಸ್ತಕಗಳಿಗಿದೆ

satyadarshana

“ಮಳೆಯೇ ಪರಿಸರದ ಬ್ಯಾಂಕ್ ಪರಿಸರವೇ ಆಕ್ಸಿಜನ್ ಟ್ಯಾಂಕ್” -ದಂಡಿನ

satyadarshana

ಕೊಪ್ಪಳ ಜಿಲ್ಲಾ ರಜತ ಮಹೋತ್ಸವ: ಗಮನ ಸೆಳೆದ ಮೆರವಣಿಗೆ —

satyadarshana

Leave a Comment