Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಡಾ. ಅಂಬೇಡ್ಕರ್‌ ಆದರ್ಶ ಜೀವನಕ್ಕೆ ದಾರಿದೀಪ: ಕಳಕಪ್ಪ ಬಂಡಿ

ಗದಗ :  ಗಜೇಂದ್ರಗಡದಲ್ಲಿ ಸಂವಿಧಾನ    ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ ರಾಷ್ಟ್ರದ ದೊಡ್ಡ ಶಕ್ತಿ, ಎಲ್ಲರೂ ಆರಾಧಿಸುವ ಜ್ಞಾನಿ. ಆ ನಿಟ್ಟಿನಲ್ಲಿ ಡಾ. ಅಂಬೇಡ್ಕರ್‌ ಅವರ ಆದರ್ಶಗಳು ಪ್ರತಿಯೊಬ್ಬರ ಜೀವನಕ್ಕೆ ಮಾರ್ಗದರ್ಶಿ ಹಾಗೂ ದಾರಿದೀಪವಾಗಿದೆ ಎಂದು ಶಾಸಕ ಕಳಕಪ್ಪ ಬಂಡಿ  ಹೇಳಿದ್ದಾರೆ. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ  ಗುರುವಾರ ನಡೆದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ವಿಶ್ವದಲ್ಲಿಯೇ ಮಾದರಿ ಹಾಗೂ ಅತ್ಯಂತ ಶ್ರೇಷ್ಠ ಸಂವಿಧಾನನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಭಾರತದಂತಹ ಬೃಹತ್‌ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನ ಉಳಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಅವರು ಪ್ರತಿಪಾದಿಸಿದರು.

ಭಾರತದ ಸಂವಿಧಾನದ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಂವಿಧಾನ ನೀಡಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ. ಆ ನಿಟ್ಟಿನಲ್ಲಿ ವಿಶ್ವದಲ್ಲಿ 143 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌  ಅವರ ಜನ್ಮ ದಿನವನ್ನು ಆಚರಿಸಲಾಗುತ್ತಿದೆ ಎಂದರು.

Related posts

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ದ -ಬಸವರಾಜ ಬೊಮ್ಮಯಿ.

satyadarshana

satyadarshana

ಬದಲಾವಣೆಯ ಹಾದಿಯಲ್ಲಿ ಜಕ್ಕಲಿ ಸರ್ಕಾರಿ ಶಾಲೆ: ದಾಖಲಾತಿ ಆಂದೋಲನಕ್ಕೆ ಭರ್ಜರಿ ಚಾಲನೆ

satyadarshana

Leave a Comment