Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್.

ಬೆಂಗಳೂರು: (17 ಜೂನ್)  ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಅದರಲ್ಲೂ ಬೆಂಗಳೂರಿನಲ್ಲೇ 10 ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ, ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಜೆಪಿ ನಗರದ ಶಿವಲಿಂಗಯ್ಯ ಅವರಿಗೆ ಸೇರಿದ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿವಲಿಂಗಯ್ಯ ಬಿಡಿಎನ ಗಾರ್ಡೇನೇಯರ್ ಆಗಿದ್ದಾರೆ. ಅಷ್ಟೇ ಅಲ್ಲದೇ ಬಸವನಗುಡಿ, ಕನಕಪುರ ರೋಡ್, ಹಾಗೂ ದೊಡ್ಡಕಲ್ಲಸಂದ್ರದ ಮನೆಗಳ ಮೇಲೆ ದಾಳಿ ನಡೆದಿದೆ. ಕೇವಲ ಬೆಂಗಳೂರೊಂದೇ ಅಲ್ಲದೇ ರಾಜ್ಯದ ನಾನಾ ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜನಾರ್ದನ್ ಹಾಗೂ ಅವರ ಆಪ್ತರ ಮನೆ ಮೇಲೂ ದಾಳಿ ನಡೆದಿದ್ದು, ಇದೀಗ ಜನಾರ್ದನ್ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ವಿಭಾಗದ ರಿಜಿಸ್ಟರ್ ಆಗಿ ನಿವೃತ್ತಿ ಹೊಂದಿದ್ದರು. ಸದ್ಯ ಚಂದ್ರಲೇಔಟ್‍ನಲ್ಲಿ ವಾಸಿಸುತ್ತಿದ್ದಾರೆ.

Related posts

ಗಂಗಾವತಿ ಜಂಗಮರ ಕಲ್ಗುಡಿ ಗ್ರಾಮ ಪಡಿತರ ಅಕ್ರಮ ದಂದೆ, 100 ಹೆಚ್ಚು ಚೀಲ ಅಕ್ಕಿ ವಶ

satyadarshana

ರಾತ್ರಿ ಕಾಮಗಾರಿ.ಸರ್ಕಾರಿ ನಿಯಮಕ್ಕಿಲ್ಲ ಬೆಲೆ | ಅಕ್ರಮ ಕಂಡರೂ ಕಾಣದಂತೆ ವರ್ತಿಸುತ್ತಿರುವ ಅಧಿಕಾರಿಗಳು

satyadarshana

ಗದಗ ಜಿಲ್ಲೆಯ ನಂದಿಶ್ವರ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 256 ರ ನೂತನ ಅಂಗನವಾಡಿ ಕಟ್ಟಡದ ಭೂಮಿ ಪೂಜೆ

satyadarshana

Leave a Comment