Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

‘ಬೆಂಗಳೂರಿನಲ್ಲಿ ಮುರುಘಾ ಶ್ರೀಗಳ ವಿರುದ್ಧ ದೂರು ನೀಡಲಾಗದೇ ಮಕ್ಕಳು ಆತ್ಮಹತ್ಯೆಗೆ ಮುಂದಾಗಿದ್ರು’

ಮೈಸೂರು: ಚಿತ್ರದುರ್ಗದ ಪ್ರತಿಷ್ಠಿತ ಮಠದ ವಿರುದ್ಧ ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ.

ಈ ಬಗ್ಗೆ ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಮಾತನಾಡಿದ್ದು, ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು ಎಂಬ ಭಾವನೆ ಇತ್ತು. ಮಕ್ಕಳ ಹೇಳಿಕೆ ಬಳಿಕ‌ ಸ್ವಾಮೀಜಿಯವರ ಬಗ್ಗೆ ನಮಗೆ ಅಸಹ್ಯ ಹುಟ್ಟಿದೆ ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಮಕ್ಕಳು ಚಿತ್ರದುರ್ಗದಲ್ಲಿ ಓದುತ್ತಿದ್ದರು. ಆ ಮಕ್ಕಳ ಮೇಲೆ ಸ್ವಾಮೀಜಿಯವರು ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ ಅವರ ಕಿರುಕುಳದಿಂದ‌ ಬೇಸತ್ತ ಮಕ್ಕಳು ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅಲ್ಲಿ ಸಾಧ್ಯವಾಗದೇ ಇದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದರು. ಆದರೆ ಒಬ್ಬರು ಆಟೋ ಚಾಲಕ ಅವರಿಗೆ ಸಹಾಯ ಮಾಡಿ ನಮ್ಮ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಕಳುಹಿಸಿಕೊಟ್ಟರು. ಆ ಇಬ್ಬರು ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿದಾಗ ಸ್ವಾಮೀಜಿಯವರ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಕ್ಷಣ ನಾವು ಮಕ್ಕಳು ಹಕ್ಕುಗಳ ರಕ್ಷಣಾ ಕೇಂದ್ರದವರಿಗೆ ವಿಚಾರ ತಲುಪಿಸಿದೆವು. ಅವರೂ ಸಹ ಕೌನ್ಲಿಲಿಂಗ್ ಮಾಡಿ ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಖಚಿತವಾದ ನಂತರ‌ ನಿನ್ನೆ ರಾತ್ರಿ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಶಿವಮೂರ್ತಿ ಶರಣರು ಸೇರಿ ಐವರು ವಿರುದ್ದ ದೂರು ದಾಖಲಾಗಿದೆ. ನಾವು ಅದಾವುದನ್ನು ಲೆಕ್ಕಿಸದೇ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ ಎಂದರು.

Related posts

ಗಜೇಂದ್ರಗಡ ಪ್ರಸಿದ್ಧಿಯ ಶ್ರೀ ಚೌಡೇಶ್ವರಿ ದೇವಿಯ ಮೂರ್ತಿಯೂ ಭಕ್ತರ ಅಂತರಂಗದಲ್ಲಿ ಬೆಳಕು ಮೂಡಿಸುವಂತಹ ಕಾರ್ತಿಕೋತ್ಸವ.

satyadarshana

ತಾಯಿಯ ಹೆಸರಿನಲ್ಲಿ ಒಂದು ವೃಕ್ಷ – ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯಕ್ರಮ

satyadarshana

70 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ:ಶಾಸಕ ಜಿ ಎಸ್ ಪಾಟೀಲ

satyadarshana

Leave a Comment