ಗದಗ : ( ಸತ್ಯದರ್ಶನ ) ಸೆಪ್ಟೆಂಬರ್ 9: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯುಪಿಎಸ್ಸಿ, ಕೆ.ಎಎಸ್ ಬ್ಯಾಂಕಿಂಗ್, ಗ್ರುಪ್ – ಸಿಎಸ್ಎಸ್ಸಿ, ಆರ್ಆರ್ಬಿ, ಜ್ಯೂಡಿಷಿಯಲ್ ಸರ್ವಿಸಸ್/ಏರ್ಹಾಸ್ಟೆಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅವಕಾಶ ಕಲ್ಪಿಸಲಾಗಿದೆ.
ಪರಿಶಿಷ್ಟ ಜಾತಿಯ ಪರಿಶಿಷ್ಟ ವರ್ಗಗಳ ಅರ್ಹ ಅಭ್ಯರ್ಥಿಗಳು ಅರ್ಜಿಸಬಹುದು. ಅರ್ಜಿಯನ್ನು www.sw.kar.nic.in ನಲ್ಲಿ ಸೆಪ್ಟೆಂಬರ 20ರೊಳಗಾಗಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 5,00,000/-ದೊಳಗಿರಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9482300400 ಹಾಗೂ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗದಗ/ಮುಂಡರಗಿ/ಶಿರಹಟ್ಟಿ/ರೋಣ/ನರಗುಂದ ಇವರಿಗೆ ಸಂಪರ್ಕಿಸಬಹುದಾಗಿದೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
