Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆದೇಶ-ವಿದೇಶಬಿಸಿ ಬಿಸಿ ಸುದ್ದಿರಾಜ್ಯ

ಬೆಳೆ ಸಮೀಕ್ಷೆ ಆ್ಯಪ್ ದಾಖಲೆ ಕಡ್ಡಾಯ.

 

ಗದಗ ( ಸತ್ಯ ದರ್ಶನ ) ಸೆಪ್ಟೆಂಬರ್ 16: 2022-23 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್‍ನಿಂದ ಖಾರೀಫ್ ಫಾರ್ಮರ್ ಕ್ರಾಪ್ ಸರ್ವೆ ಆ್ಯಪ್ 2022-23 ನ್ನು ಡೌನ್‍ಲೋಡ್ ಮಾಡಿಕೊಂಡು ಬೆಳೆ ವಿವರಗಳನ್ನು ಸೆಪ್ಟೆಂಬರ್ 30 ರೊಳಗಾಗಿ ದಾಖಲಿಸಬೇಕಾಗಿರುತ್ತದೆ.
ಹೀಗೆ ವಿವರಗಳನ್ನು ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವದರಿಂದ ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.
        ರೈತರು ಬೆಳೆ ವಿವರಗಳನ್ನು ಅಪ್‍ಲೋಡ್ ಮಾಡದಿದ್ದಲ್ಲಿ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ದಾಖಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ 8448447715 ಗೆ ಕರೆ ಮಾಡಬಹುದಾಗಿದೆ.  

Related posts

ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಣ್ಣ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ.

satyadarshana

ಕ್ಷುಲ್ಲಕ ಕಾರಣಕ್ಕೆ ಗಲಾಟೆ, ವ್ಯಕ್ತಿ ಮೇಲೆ ಹಲ್ಯೆ.

satyadarshana

ಕಳಪೆ ಕಾಮಗಾರಿ ತಪಾಸಣೆಗೆ ಆಗ್ರಹ

satyadarshana

Leave a Comment