Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಾಷ್ಟ್ರೀಯ ಏಕತಾ ದಿವಸ: ಪ್ರತಿಜ್ಞಾ ವಿಧಿ ಸ್ವೀಕಾರ

ಗದಗ( ಸತ್ಯದರ್ಶನ ) ಅ. 31: ದಿ.ಸರ್ದಾರ್ ವಲ್ಲಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ “ರಾಷ್ಟ್ರೀಯ ಏಕತಾ ದಿವಸ” ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ. ಅವರು ರಾಷ್ಟ್ರದ ಐಕ್ಯತೆ, ಸಮಗ್ರತೆ, ಭದ್ರತೆ ಮತ್ತು ರಾಷ್ಟ್ರೀಯ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುವ ಹಾಗೂ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಎಲ್ಲ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುವ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.

ಕೃಷಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ, ಲೋಕೊಪಯೋಗಿ ಇಲಾಖೆ ಸಚಿವ ಸಿ.ಸಿಪಾಟೀಲ, ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಶಿನ್, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿ.ಪಂ. ಸಿ.ಇ.ಓ ಡಾ.ಸುಶೀಲಾ ಬಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಉಪವಿಭಾಗಾಧಿಕಾರಿ ಅನ್ನಪೂರ್ಣ ಸೇರಿದಂತೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಬರ ಮುನ್ಸೂಚನೆ; ಯಲಬುರ್ಗಾ, ಕುಕನೂರು ತಾಲ್ಲೂಕಿನಲ್ಲಿ ಕ್ರೀಯಾಯೋಜನೆ ರೂಪಿಸಲು ಶಾಸಕರ ಸೂಚನೆ

satyadarshana

152ನೇ ಗಾಂಧೀಜಿ ಜಯಂತಿ ಸಂಭ್ರಮ

satyadarshana

ಗದಗ ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

satyadarshana

Leave a Comment