ಗಜೇಂದ್ರಗಡ: ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಗಿರೀಶ್ ವೇರ್ಣೇಕರ ಹೇಳಿದರು.
ನಗರದ ಡಿಪೋ ಬಳಿಕ ಓಂ ಶ್ರೀ ಶಾಲೆಯಲ್ಲಿ ನಡೆದ 11 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದರು.
ಕೆಲವು ಮಕ್ಕಳು ಕೇವಲ ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳುವುದು ಒಳ್ಳೆಯ ಬೆಳವಣಿಯಾಗಿದೆ. ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್ ,ಟಿವಿ, ಗೆ ಅಂಟಿಕೊಂಡಿರುತ್ತಾರೆ ಮತ್ತೆ ಕೆಲವರು ಯಾರೊಂದಿಗೂ ಬೆರೆಯದೆ ಒಬ್ಬಂಟಿಯಾಗಿರಲು ಬಯಸುತ್ತಾರೆ ಆದರೆ ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳಬೇಕು ಎಂದರು.
ಬಳಿಕ ಸಂಸ್ಥೆ ಅಧ್ಯಕ್ಷ ಆನಂದ ಮಂತ್ರಿ ಮಾತನಾಡಿ ಚಿಕ್ಕಂದಿನಿಂದಲೇ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವುದರಿಂದ ಬುದ್ಧಿಶಕ್ತಿ ಧೈರ್ಯ ಹೆಚ್ಚಿ ಭಯ ಹೋಗಲಾಡಿಸಬಹುದು ವರ್ಷದ ಶಾಲಾ ವಾರ್ಷಿಕೋತ್ಸವದಲ್ಲಿ ಮನರಂಜನೆಗಳಲ್ಲಿ ಭಾಗವಹಿಸುವುದರಿಂದ ನಷ್ಟವಾಗುವುದಿಲ್ಲ ಇದಕ್ಕೆ ಪೋಷಕರ ಸಹಮತವೂ ಇರಬೇಕಿದೆ ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕ ರಾಘವೇಂದ್ರ ಕೊಣ್ಣೂರಕರ ಅವರು ವೇದಿಕೆಯ ಮೇಲೆ ಶಾಲಾ ವರದಿಯನ್ನು ತಿಳಿಸಿದರು. ಹಲವು ಕ್ರೀಡೆಗಳಲ್ಲಿ ಭಾಗವಹಿಸಿ ತಾಲೂಕು ಜಿಲ್ಲಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಗೌರವಿಸಲಾಯಿತು.
ಬಳಿಕ ಶಾಲಾ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ಮೂಡಿಬಂದವು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಮೋಹನ ಕನಕೇರಿ
ಕವಿತಾ ಹಾದಿಮನಿ, ಪರ್ಜಾನ ಮುದೋಳ, ಮಲ್ಲಪ್ಪ ಮಾಟರಂಗಿ, ಸಿದ್ದು ವಿ.ಜಿ.,ನಾಜೀಯಾ ಮುದಗಲ್,ವಿಜಯಲಕ್ಷ್ಮಿ ಕೆಲೂಡಿ,ಕುಶಾಲಾ ಬಳೂಟಗಿ, ಕಾವ್ಯಾ ಕೊತಬಾಳ,ಚೈತ್ರಾ ಗಾಯಕವಾಡ, ಪೂಜಾ ಡಿ, ಉಮಾ ಪರಮನವರ, ಹೀನಾಕೌಸರ ಅರಳಿಕಟ್ಟಿ, ತುಳಸಿ ಜೋಶಿ, ಲಕ್ಷ್ಮಿಕಾಂತ ಗಾಡಗೋಳಿ ಸೇರಿದಂತೆ ಬೋದಕೇತರ ಸಿಬ್ಬಂದಿಗಳು ಹಾಜರಿದ್ದರು.
