Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಜಿಲ್ಲಾ‌ ಮಟ್ಟದ ಫಲಾನುಭವಿಗಳ‌ ಸಮ್ಮೇಳನ : ಸಿದ್ಧತೆಗಳ ಪರೀಶಿಲನೆ

ಗದಗ: ಮಾ.12:  ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನವು ಸೋಮವಾರದಂದು ಬೆಳಿಗ್ಗೆ 11  ಗಂಟೆಗೆ ರೋಣ‌ ಹೊರವಲಯದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳನ್ನು ಶಾಸಕರಾದ ಕಳಕಪ್ಪ ಬಂಡಿ ಹಾಗೂ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅವರು ಪರಿಶೀಲಿಸಿದರು.

 ಕಾರ್ಯಕ್ರಮದ ಮುಖ್ಯ ವೇದಿಕೆ, ಫಲಾನುಭವಿ, ಸಾರ್ವಜನಿಕರ ಆಸನ ವ್ಯವಸ್ಥೆ ಹಾಗೂ ವಾಹನ ನಿಲುಗಡೆ ಸೇರಿದಂತೆ ಸಮ್ಮೇಳನಕ್ಕೆ ಆಗಮಿಸುವ ಫಲಾನುಭವಿ ಹಾಗೂ ಸಾರ್ವಜನಿಕರಿಗೆ ಮಾಡಲಾದ ಊಟದ ವ್ಯವಸ್ಥೆ ಸಿದ್ಧತೆಯನ್ನು ಪರಿಶೀಲಿಸಿದರು.  ಕಾರ್ಯಕ್ರಮದಲ್ಲಿ ಯಾವುದೇ ಅನಾನೂಕುಲಗಳಾಗದಂತೆ ನಿಗಾವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೇ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ., ಅಪರ‌ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ತಹಶೀಲ್ದಾ ವೀಣಾ ಉಂಕಿ, ಆಹಾರ ಇಲಾಖೆ ಉಪನಿರ್ದೆಶಕ ಗಂಗಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಸೋಮವಾರದಂದು ಜರುಗಲಿರುವ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೋಣ ಮತ ಕ್ಷೇತ್ರದ  ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಜೊತೆಗೆ ವಿವಿಧ ಇಲಾಖೆಗಳ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಹಾಗೂ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಜರುಗಲಿದೆ.

Related posts

ರಾಗಿ ಖರೀದಿ ಕೇಂದ್ರದಲ್ಲಿ ರೈತರಿಗೆ ದ್ರೋಹ, ವಂಚನೆ ಮಾಡುವವರ ವಿರುದ್ದ ಶಿಸ್ತು ಕ್ರಮ ಕೈ ಗೊಳ್ಳಿ. -ಹುಲಿ ಕಟ್ಟಿ ಹನುಮಂತಪ್ಪ.

satyadarshana

ರಾಜ್ಯದ ರೈತರು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ..

satyadarshana

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ನ್ಯಾ. ಮಲ್ಲಿಕಾರ್ಜುನ ಗೌಡ ಮೇಲೆ ಕ್ರಮಕ್ಕೆ ಆಗ್ರಹ

satyadarshana

Leave a Comment