Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಶಿಥಿಲಾವಸ್ಥೆಯಲ್ಲಿರುವ ಶಾಲಾ, ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಿ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶೀಖಾ

ಗದಗ: ಅಗಸ್ಟ 5: ಜಿಲ್ಲೆಯ ಶಿಥಿಲಾವಸ್ಥೆಯಲ್ಲಿರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕುರಿತು ಪರಿಶೀಲನೆ ನಡೆಸಿ ಅವುಗಳ ದುರಸ್ತಿಗೆ ತ್ವರಿತವಾಗಿ ಕ್ರಮ ವಹಿಸಿ ವಿಧ್ಯಾರ್ಥಿಗಳ ಸುರಕ್ಷತೆಗೆ ಆದ್ಯತೇ ನೀಡುವಂತೆ ವಾಣಿಜ್ಯ ತೆರಿಗೆ ಇಲಾಖೆ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಿ.ಶಿಖಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಸಾಯಂಕಾಲ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅತೀವೃಷ್ಠಿ ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದ ಅವರು ಜನಸಾಮಾನ್ಯರ ಜೀವ ರಕ್ಷಣೆಗೆ ಆಧ್ಯತೇ ನೀಡಬೇಕು. ಅತೀವೃಷ್ಟಿಯಿಂದ ಆಗುವ ಜೀವಹಾನಿ ತಡೆಗೆ ಅಗತ್ಯವಿರುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಸೂಚಿಸಿದರು.

ಗ್ರಾಮೀಣ ಭಾಗದಲ್ಲಿನ ಸಾರ್ವಜನಿಕರಿಗೆ ಸರಬರಾಜು ಮಾಡಲಾಗುತ್ತಿರುವ ಕುಡಿಯುವ ನೀರಿನ ಶುದ್ಧತೆ ಕುರಿತು ಕಡ್ಡಾಯವಾಗಿ ನೀರಿನ ಪರೀಕ್ಷೆಗೆ ಒಳಪಡಿಸಿ ಕುಡಿಯುಲು ಯೋಗ್ಯವಿದ್ದಲ್ಲಿ ಮಾತ್ರ ನೀರನ್ನು ಬಳಸಲು ನಿರ್ದೇಶನ ನೀಡಬೇಕು. ಜೊತೆಗೆ ಸುತ್ತಲಿನ ವಾತಾವರಣದ ಸ್ವಚ್ಛತೆಗೆ ಆಧ್ಯತೇ ನೀಡಲು ಜಾಗೃತಿ ಮೂಡಿಸಬೇಕು. ಸಾಂಕ್ರಾಮಿಕ ರೋಗಗಳ ಕುರಿತು ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.

ಶೈಕ್ಷಣಿಕ ರಂಗದಲ್ಲಿ ಜಿಲ್ಲೆಯ ಸ್ಥಾನಮಾನ ಕುರಿತು ಮಾಹಿತಿ ಪಡೆದ ಅವರು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಿ.ಯು.ಸಿ. ಹಾಗೂ ಎಸ್.ಎಸ್.ಎಲ್.ಸಿ ಫಲಿತಾಂಶವು ಮೊದಲ ಹತ್ತು ಸ್ಥಾನಗಳಲ್ಲಿ ಇರುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಅನೇಕ ಸೌಲಭ್ಯಗಳು ಇದ್ದರೂ ಸಹ ಕನಿಷ್ಠ ಪ್ರಗತಿಗೆ ಬೇಸರ ವ್ಯಕ್ತ ಪಡಿಸಿದ ಅವರು ಶಿಕ್ಷಕರು ಹಾಗೂ ಇಲಾಖಾ ಅಧಿಕಾರಿಗಳು ಕಠಿಣ ಶ್ರಮ ಹಾಗೂ ಆಸಕ್ತಿಯಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಿರಂತರ ಶ್ರಮಿಸಬೇಕೆಂದು ನಿರ್ದೇಶನ ನೀಡಿದರು.

ಸರ್ಕಾರದ ಆಶಯಕ್ಕನುಗುಣವಾಗಿ ಅಧಿಕಾರಿಗಳೆಲ್ಲ ಕಾರ್ಯನಿರ್ವಹಿಸಬೇಕು. ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆ ಉತ್ತಮ ಸಾಧನೆ ಮಾಡಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳ ಸವಲತ್ತುಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು. ಈ ಬಗ್ಗೆ ಸಂಬಂಧಿತ ಎಲ್ಲ ಇಲಾಖಾ ಅಧಿಕಾರಿಗಳು ನಿರಂತರ ಕಾರ್ಯನಿರ್ವಹಣೆ ಅಗತ್ಯವಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಿಗೆ ಜಿಲ್ಲೆಯ ಪ್ರಗತಿ ಕಾಮಗಾರಿಗಳ ಮಾಹಿತಿ ಒದಗಿಸಿ ಪ್ರಗತಿ ಪರಿಶೀಲನೆಗೆ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ವಾಗೀಶ, ಜಂಟಿ ಕೃಷಿ ನಿರ್ದೇಶಕಿ ತಾರಾಮನಿ, ಜಿಮ್ಸ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಲೀಡ ಬ್ಯಾಂಕ ಮ್ಯಾನೆಜರ ಜಬ್ಬಾರ ಅಹ್ಮದ, ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದರು.

 

Related posts

ದುಡಿಯೋಣ ಬಾ’ ಅಭಿಯಾನ ಯಶಸ್ವಿಗೆ ಆದ್ಯತೆ

satyadarshana

ಗಜೇಂದ್ರಗಡ ತಾಲೂಕಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ.

satyadarshana

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ದ -ಬಸವರಾಜ ಬೊಮ್ಮಯಿ.

satyadarshana

Leave a Comment