ಕೊಪ್ಪಳ : ಸಂಸ್ಕೃತಿ ಇಲಾಖೆ ವತಿಯಿಂದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜನವರಿ 17 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಬುರಗಿ ವಲಯದ ಜಂಟಿ ನಿರ್ದೇಶಕರಾದ ಬಸವರಾಜ ಹೂಗಾರ, ಕೊಪ್ಪಳ ತಹಶೀಲ್ದಾರರಾದ ವಿಠ್ಠಲ್ ಚೌಗಲಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ಬಿ.ತಳವಾರ ಆಗಮಿಸುವರು.
ಜನಪರ ಉತ್ಸವ ಅಂಗವಾಗಿ ಕಲಾವಿದರು ಹಾಗೂ ಕಲಾತಂಡಗಳಿAದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
