Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ: ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಮಾಣಿಕ್ ರಾವ್ ಪಾಟೀಲ್

ಗದಗ : ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಗೆ ಗದಗ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ, ತಹಶೀಲ್ದಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭೇಟಿ ನೀಡಿ ಪರಿಶೀಲಿಸಿದರು.

ಗ್ರಾಮಸ್ಥರು ಎದುರಿಸುತ್ತಿರುವ ಕುಡಿಯುವ ನೀರಿನ ಬವಣೆ ಕುರಿತು ಪತ್ರಿಕೆ ವರದಿ ಆಧರಿಸಿ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗೆ ಸ್ಪಂದಿಸಿದೆ.

ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ್ ರಾವ್ ಪಾಟೀಲ್ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರಿಂದ ಮಾಹಿತಿ ಪಡೆದ ಅವರು ಪ್ರಸ್ತುತ ಕುಡಿಯುವ ನೀರನ್ನು ಪರೀಕ್ಷೆ ಮಾಡಿಯೇ ಎರೇ ಹಂಚಿನಾಳ ಗ್ರಾಮದಿಂದ ಟ್ಯಾಂಕರಗಳ ಮೂಲಕ ಸರಬರಾಜು ಮಾಡಲಾಗುತ್ತಿದ್ದು ಗ್ರಾಮದಲ್ಲಿ ನೀರಿನ ಹೆಚ್ಚಿನ ಭೇಡಿಕೆ ಇದ್ದಲ್ಲಿ ಹೆಚ್ಚಿನ ಟ್ಯಾಂಕರಗಳ ಮೂಲಕ ಒದಗಿಸಲು ಖWS ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವರಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ನಿರ್ದೇಶಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

 

Related posts

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ.

satyadarshana

ಕಟಾವು ಮಾಡಿ ಕಣದಲ್ಲಿಟ್ಟು ಬೆಳೆ ಕಳೆದುಕೊಂಡವರಿಗೆ ನಷ್ಟ’ ಕೊಳೆತ ಬೆಳೆಗಳಿಗೆ ಸಿಗಲ್ಲ ಸರ್ಕಾರದ ಪರಿಹಾರ!

satyadarshana

ರಾಯರ ಹೆಸರು ಮನಸಾರೆ ಹೇಳುತ್ತ “ರಾಜಾಸೀಟ್” ಚಿತ್ರ ತಂಡಕ್ಕೆ ಶುಭ ಕೋರಿದ ನವರಸ ನಾಯಕ.

satyadarshana

Leave a Comment