Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅರ್ಜಿ ಆಹ್ವಾನ

 

ಗದಗ: ಜೂನ್ 1: 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು / ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಂಡರಗಿ ಇಲ್ಲಿ ಕನ್ನಡ, ಇಂಗ್ಲೀಷ್, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಲು ಸದರಿ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ (ವಿಜ್ಞಾನ) ಪಿ.ಸಿ.ಎಂ.ಬಿ. ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಭೋದಿಸಲು ತಾತ್ಕಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಜೂನ್ 8 ರೊಳಾಗಿ ಸಂಬಂಧಿಸಿದ ಪ್ರಾಂಶುಪಾಲರನ್ನು ಕಛೇರಿ ವೇಳೆಯಲ್ಲಿ ಭೇಟಿ ಮಾಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕಾಶಿನಾಥ ಕೆ, (ದೂ.ಸಂ:8722390388 ) , ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಪದವಿಪೂರ್ವ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಮಂಜುಳಾ ಆರಿಕಟ್ಟಿ (ದೂ.ಸಂ:8861332782) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Related posts

ಎಸ್ ಜಿ ವಿ ಆರ್ ಶಾಲೆ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ

satyadarshana

ಅರ್ಜಿ ಆಹ್ವಾನ

satyadarshana

ಮಂಗಳೂರು ಸಮಾಚಾರ’ದಿಂದ ಡಿಜಿಟಲ್ ಯುಗದವರೆಗೆ: ಕನ್ನಡ ಪತ್ರಿಕೋದ್ಯಮದ 183 ವರ್ಷಗಳ ಪಯಣ

satyadarshana

Leave a Comment