Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ

 ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ

ಗಜೇಂದ್ರಗಡ: ತಾಲೂಕಿನ ನಿಡಗುಂದಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ತಾಲೂಕು ಪಂಚಾಯತ್, ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಸಹಯೋಗದಲ್ಲಿ ಇಂದು ವಿಶ್ವ ಪರಿಸರ ದಿನ ಅಂಗವಾಗಿ PLANT 4 MOTHER (ತಾಯಿಯ ಹೆಸರಿನಲ್ಲಿ ಒಂದು ವೃಕ್ಷ) ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಬಡಿಗೇರ್ ಚಾಲನೆ ನೀಡಿದರು.

ಈ ವೇಳೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಬಡಿಗೇರ್ ಸಸಿಗೆ ನೀರುಣಿಸಿ ಮಾತನಾಡಿದ ಅವರು, ಮನುಷ್ಯ ಗಿಡಗಳನ್ನು ನಾಶ ಮಂಆಡುವ ಮೂಲಕ ಪರಿಸರ ನಾಶದಿಂದ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿದ್ದು, ಮನುಷ್ಯನ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅದನ್ನು ತಪ್ಪಿಸಲು ಪರಿಸರ ರಕ್ಷಣೆಗೆ ನಾವು ನೀವುಗಳು ಮುಂದಾಗಬೇಕಾಗಿದೆ. ಆ ನಿಟ್ಟಿನಲ್ಲಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ ದೇಶಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಪ್ರತಿಯೊಬ್ಬರು ತಮ್ಮ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಟ್ಟು ಅವುಗಳನ್ನು ಪೋಷಿಸಿ ಬೆಳೆಸುವ ಮೂಲಕ ಪರಿಸರ ರಕ್ಷಣೆಯ ಮುಂದಾಗಬೇಖು. ಸಸಿ ನೆಟ್ಟು ಕೈಬಿಡಬೇಡಿ ಕನಿಷ್ಠ ವರ್ಷವಾದರೂ ಅದಕ್ಕೆ ನೀರು ಹಾಕುವ ಮೂಲಕ ಬೆಳೆಸಬೇಕು ಎಂದು ತಿಳಿಸಿದರು.

ಸಾಮಾಜಿಕ ಅರಣ್ಯ ಇಲಾಖೆ ಅಧಿಖಾರಿ ರಾಮಣ್ಣ ಪೂಜಾರ ಮಾತನಾಡಿ, ವಿಶ್ವ ಪರಿಸರ ದಿನ ಅಂಗವಾಗಿ ಪ್ರಧಾನ ಮಂತ್ರಿಯವರ ಪ್ಲಾಂಟ್ 4 ಮದರ್ (ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ) ಅಭಿಯಾನ ಹಮ್ಮಿಕೊಳ್ಳಲು ಕರೆ ನೀಡಿದರು ಅದರಂತೆ ದೇಶಾದ್ಯಂತ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಗೀತಾ ಫಕ್ಕಿರಪ್ಪ ಕುಕನೂರು, ಸದಸ್ಯರಾದ ಮರ್ತುಜಾ ಖಾದರ್ ಮುಲ್ಲಾ, ಅಂದಪ್ಪ ಚಲವಾದಿ, ಪಿಡಿಒ ಅಮರೇಶ ಮೂಲಿಮನಿ, ಕಾರ್ಯದರ್ಶಿ ಶರಣಪ್ಪ ಮೇಟಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ರೇಖಾ ಹೊಸಮನಿ, ಗಣ್ಯರಾದ ಅಂದಪ್ಪ ಬಿಚ್ಚೂರು, ಗೋವಿಂದ ಪೂಜಾರ, ರಮೇಶ ಸೇಬಗೊಂಡ, ಹೊನ್ನಪ್ಪ ಕಂಬಳಿ, ಶರಣಪ್ಪ ಗಡಾದ, ಅರಣ್ಯ ಿಲಾಖೆ ಸಿಬ್ಬಂದಿಗಳಾದ ಜಗದೀಶ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಪಂಚಾಯತ ಸಿಬ್ಬಂದಿಗಳು ಇದ್ದರು.

Related posts

ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಸಮರ್ಥ ತರಬೇತಿ ನೀಡಿ- ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ

satyadarshana

ಕೇಂದ್ರ ಬಿಜೆಪಿ ಸರಕಾರದ ಬೆಲೆ ಎರಿಕೆ ಖಂಡಿಸಿ ವಲಯವಾರು ಪ್ರತಿಭಟನೆ

satyadarshana

2023 ರ ಸ್ವಾತಂತ್ರೊö್ಯÃತ್ಸವ ದಿನಾಚರಣೆ ನಿಮಿತ್ಯ ಅತ್ಯುತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಪುರಸ್ಕಾರ ಪಡೆದವರ ಮಾಹಿತಿ ನೀಡುವ ಕುರಿತು.

satyadarshana

Leave a Comment