Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಪೊಲೀಸ ಹುತಾತ್ಮರ ದಿನಾಚರಣೆ ನೊಂದವರ ಧ್ವನಿಯಾಗಿ ಪೊಲೀಸ ಇಲಾಖೆಯ ಸೇವೆ ಅಪಾರ

ಗದಗ: ಅಕ್ಟೋಬರ್21: ಸಮಾಜದ ಒಳಿತಿಗಾಗಿ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ನೊಂದವರ ಧ್ವನಿಯಾಗಿ ಪೊಲೀಸ್ ಇಲಾಖೆಯ ಸೇವೆ ಅಪಾರವಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಬಸವರಾಜ ಅವರು ಹೇಳಿದರು.

ನಗರದ ಜಿಲ್ಲಾ ಪೊಲೀಸ ಕಚೇರಿ ಆವರಣದಲ್ಲಿ ಸೋಮವಾರ ಗದಗ ಜಿಲ್ಲಾ ಪೊಲೀಸ ಇಲಾಖೆ ವತಿಯಿಂದ ಕರ್ತವ್ಯ ಪಾಲನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸರ ನೆನಪಿಗಾಗಿ ಏರ್ಪಡಿಸಿದ ಪೊಲೀಸ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪೊಲೀಸ ಇಲಾಖೆಯು ಎರಡು ವಿಭಾಗದಲ್ಲಿ ನೋಡುವುದಾದರೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ತಡೆ ಮಾಡುವ ಕಾರ್ಯದಲ್ಲಿ ವಿಶ್ರಾಂತಿ ಇಲ್ಲದೇ ನಿರಂತರ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತದೆ. ಇಂತಹ ಕಾರ್ಯದಿಂದಾಗಿಯೇ ಪೊಲೀಸರ ತ್ಯಾಗ, ಬಲಿದಾನ, ಸಾಹಸ ಸ್ಮರಣೀಯವಾದುದು ಎಂದರು.

ಪೊಲೀಸ ಇಲ್ಲದ ಸಮಾಜ ಕಲ್ಪಿಸಿಕೊಳ್ಳುವುದು ಅಸಾಧ್ಯ. ಅನ್ಯಾಯ, ಸುಲಿಗೆ ತಡೆದು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆ ನಿಲ್ಲಲು ಪೊಲೀಸ ಇಲಾಖೆಯ ಶ್ರಮ ಅಪರಮಿತ. ಭಯೋತ್ಪಾದನೆ ನಿರ್ಮೂಲನೆಗೆ ಪ್ರಾಣತ್ಯಾಗಕ್ಕೂ ಪೊಲೀಸರು ಸಿದ್ಧ. ಇದಕ್ಕೆ ಉದಾಹರಣೆ ಸಂಸದ್ ಭವನದ ಮೇಲಿನ ಧಾಳಿ ಹಾಗೂ ಮುಂಬೈನ ತಾಜ್ ಹೋಟೆಲ್ ಮೇಲಿನ ದಾಳಿ ಸಾಕ್ಷಿಯಾಗಿವೆ ಎಂದು ಹೇಳಿದರು.

ಸಮರ್ಪಿಸಿದರು. ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸAಕದ, ನರಗುಂದ ಡಿಎಸ್‌ಪಿ ಪ್ರಭುಗೌಡ ತೀರದಳ್ಳಿ, ಡಿಎಆರ್‌ಡಿ ಎಸ್ಪಿ ವಿದ್ಯಾನಂದ ನಾಯಕ , ಸಿಇಎನ್ ಘಟಕದ ಡಿಎಸ್‌ಪಿ ಮಹಾಂತೇಶ ಸಜ್ಜನರ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದರು.

ಗದಗ ಬೆಟಗೇರಿ ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರ್‌ಸಾಬ ಬಬರ್ಜಿ, ಗಣ್ಯರಾದ ಎಸ್.ಎನ್.ಬಳ್ಳಾರಿ, ರಾಮಣ್ಣ ಫಲದೊಡ್ಡಿ, ಚಿನ್ಮಯ ಹೆಗಡೆ, ಗಣೇಶ ಬ್ಯಾಳಿ, ಬಾಷಾಸಾಬ ಮಲ್ಲಸಮುದ್ರ, ಚಂದ್ರಕಾAತ ಚವ್ಹಾಣ, ಪೊಲೀಸ ಇಲಾಖೆಯ ಪ್ರಭಾರ ಸಹಾಯಕ ಆಡಳಿತಾಧಿಕಾರಿ ಮಲ್ಲನಗೌಡ ಕೆ.ಎಚ್., ಬೆಟಗೇರಿ ಸಿಪಿಐ ಡಿ ಬಿ ಸಿಂಧೆ, ಗದಗ ಗ್ರಾಮೀಣ ಪಿಎಸ್‌ಐ ಎಲ್.ಕೆ.ಜೂಲಕಟ್ಟಿ,ಮಹಿಳಾ ಪಿಎಸ್‌ಐ ಶಕುಂತಲಾ, ಬಿ.ಎಸ್.ಬಾರಕೇರ, ಸಿ.ಎಸ್.ಜಕ್ಕನಗೌಡ್ರ, ಎನ್.ಬಿ. ಭಂಗಿ, ಎಸ್.ಎಸ್.ಹೂಲಿ,ಹುತಾತ್ಮ ಪೊಲೀಸರಿಗೆ ಪುಷ್ಪಗುಚ್ಛ ಅರ್ಪಿಸುವ ಮೂಲಕ ಗೌರವ ಸಮರ್ಪಿಸಿದರು.

ಪತ್ರಿಕಾ ಮಾಧ್ಯಮದ ಪರವಾಗಿ ವಾರ್ತಾಧಿಕಾರಿ ವಸಂತ ಮಡ್ಲೂರ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ರಾಜು ಹೆಬ್ಬಳ್ಳಿ, ರಾಮು ವಗ್ಗಿ, ಗಣೇಶ ಪೈ ಗೌರವ ಸಮರ್ಪಿಸಿದರು. ಗದಗ ಜಿಲ್ಲೆಯ ಹುತಾತ್ಮ ಪೊಲೀಸರ ಧರ್ಮಪತ್ನಿಯರಾದ ಭಾರತಿ ಗಾಳರೆಡ್ಡಿ, ದೀಪಾ ವಿಠಲಾಪುರ, ರೇಣುಕಾ ಡಂಬಳ ಅವರು ಸಹ ಪುಷ್ಪ ನಮನ ಸಲ್ಲಿಸಿದರು.

ಪರೇಡ್ ಕಮಾಂಡರ್ ಶಂಕರಗೌಡ ಚೌಧರಿ ಅವರು ಶಿಸ್ತುಬದ್ಧ ಪೊಲೀಸ ಪರೇಡ್ ನಡೆಸಿಕೊಟ್ಟರು, ಎನ್.ಪಿ. ಭಟ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

satyadarshana

“ಬಿಟ್‍ಕಾಯಿನ್ ದಂಧೆಯಲ್ಲಿ” ಯಾರೆ ಇದ್ದರೂ ಶಿಕ್ಷೆ ಖಚಿತ :ನಿಷ್ಪಕ್ಷಪಾತವಾಗಿ.ತನಿಖೆ ನಡೆಸಿ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ. ಸಿಎಂ ಬಸವರಾಜ ಬೊಮ್ಮಾಯಿ

satyadarshana

ಭ್ರಷ್ಟರ ಮೇಲೆ ಲೋಕಾಯುಕ್ತ ದಾಳಿ: 48.55 ಕೋ. ರೂ. ಆಸ್ತಿ ಪತ್ತೆ

satyadarshana

Leave a Comment