Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕಲೆ, ಸಂಗೀತ, ಸಾಹಿತ್ಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗದಗ ಜಿಲ್ಲೆಯ ಕೊಡಗೆ ಅಪಾರ

 

ಗದಗ: ಡಿಸೆಂಬರ್ 4 : ಕಲೆ, ಸಂಗೀತ, ಸಾಹಿತ್ಯ, ಕ್ರೀಡೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಗದಗ ಜಿಲ್ಲೆಯ ಕೊಡಗೆ ಅಪಾರವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ತಿಳಿಸಿದರು.

ನಗರದ ಸನ್ಮಾರ್ಗ ಪದವಿ ಪೂರ್ವ ಕಾಲೇಜನಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯುವ ಸಂಘಗಳ ಒಕ್ಕೂಟ, ಲಾಯನ್ಸ್ ಶಿಕ್ಷಣ ಸಂಸ್ಥೆ, ಸನ್ಮಾರ್ಗ ಪದವಿ ಪೂರ್ವ ಮಹಾವಿದ್ಯಾಲಯ, ಇವರುಗಳ ಸಹಯೋಗದಲ್ಲಿ ಜರುಗಿದ 2024-25 ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಕುಮಾರವ್ಯಾಸ, ಭೀಮಸೇನ್ ಜೋಶಿ, ಸುನಿಲ್ ಜೋಶಿ, ಪ್ರೇಮಾ ಹುಚ್ಚಣ್ಣವರ ಅನೇಕ ಮಹನೀಯರು ತಮ್ಮ ಪ್ರತಿಭೆಯನ್ನು ರಾಷ್ಟ್ರಾದ್ಯಂತ ಪಸರಿಸಿದ್ದಾರೆ, ರಾಷ್ಟ್ರಕ್ಕೆ ಗದಗ ಜಿಲ್ಲೆ ಎಲ್ಲಾ ರಂಗಗಳಲ್ಲಿ ತನ್ನದೇ ಆದ ಕೊಡುಗೆ ನೀಡಿದೆ, ಯುವಜನತೆ ತಮ್ಮ ಆಸಕ್ತಿಯನ್ನು ಅರಿತು ಕಲೆ, ಸಂಗೀತ, ಸಾಹಿತ್ಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕ್ರಿಯಾತ್ಮಕವಾಗಿ ಪ್ರತಿಭೆಯನ್ನು ಪ್ರದರ್ಶಿಸಿ ಜಿಲ್ಲೆಗೆ ಕೀರ್ತಿ ತರಬೇಕು. ಈ ನಿಟ್ಟಿನಲ್ಲಿ ಯುವಜನೋತ್ಸವವನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ನುಡಿದರು.

ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರ ಅವರು ಮಾತನಾಡಿ ಭಾರತ ರತ್ನ ಪ್ರಶಸ್ತಿ ಪಡೆದ ಪಂ. ಭೀಮಸೇನ ಜೋಶಿಯವರು ಸಂಗೀತಕ್ಕೆ ನೀಡಿದ ಕೊಡುಗೆ ಅನನ್ಯವಾದುದು, ಪಂಡಿತ ಪುಟ್ಟರಾಜ ಗವಾಯಿಗಳು ಸಂಗೀತಕ್ಕೆ ಸಲ್ಲಿಸಿದ ಸೇವೆ ಅಪಾರ, ಯುವಜನೋತ್ಸವದಲ್ಲಿ ಪಾಲ್ಗೊಳ್ಳುವ ಎಲ್ಲ ಸ್ಪರ್ಧಾಳುಗಳು ಭಾರತೀಯ ಕಲೆಗಳತ್ತ ಗಮನಹರಿಸಿ ಉತ್ತಮ ಯಶಸ್ಸು ಪಡೆದು ವಿಭಾಗ, ರಾಜ್ಯ, ರಾಷ್ಟçಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು.

ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ರವಿಕಾಂತ ಅಂಗಡಿ ಅವರು ಮಾತನಾಡಿ ಉತ್ಸವಗಳು ವಿದ್ಯಾರ್ಥಿಗಳಲ್ಲಿ ಉತ್ಸಾಹ, ಪ್ರೇರಣೆ, ಯಶಸ್ಸು ತರಲಿ, ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ತೆಗೆದುಕೊಂಡು, ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನ ಪಡೆಯಲು ಯಾವ ರೀತಿ ತಯಾರಿ ಮಾಡಬೇಕು ಎನ್ನುವದರ ಬಗ್ಗೆ ಯೋಚನೆ ಮಾಡಿ ಕ್ರೀಡಾಮನೋಭಾವವನ್ನು ಬೆಳಸಿಕೊಳ್ಳಬೇಕು ಎಂದು ನುಡಿದರು.

ಸ್ಪೂಡೆಂಟ್ಸ್ ಎಜುಕೇಶನ್ ಸಂಸ್ಥೆಯ ಚೇರಮನ್ನ ಪ್ರೊ. ರಾಜೇಶ ಕುಲಕರ್ಣಿ ಮಾತನಾಡಿ ಯುವಜನೋತ್ಸವದಲ್ಲಿ ಅತ್ಯಂತ ಸ್ಪರ್ಧಾಮನೋಭಾವದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ವಿದ್ಯಾರ್ಥಿಗಳು ಅನಾವರಣಗೊಳಿಸಲಿ ಎಂದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸರ್ವರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ‌ಗ್ಯಾರಂಟಿ ಅನುಷ್ಟಾನ ಸಮೀತಿ ಅಧ್ಯಕ್ಷ ಬಿ,ಬಿ,ಅಸೂಟಿ, ಎಸ್ ಎನ್ ಬಳ್ಳಾರಿ ,ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ಶ್ರೀಮತಿ ರಂಜನಿ ಎನ್ ಇದ್ದರು.

ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ ವಂದಿಸಿದರು. ಪ್ರೊ. ಬಾಹುಬಲಿ ಜೈನರ ನಿರೂಪಿಸಿದರು.

 

Related posts

ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ

satyadarshana

ಕೂಡಲೇ ಸ್ವಚ್ಛ ಮಾಡಬೇಕು ಎಂದು ಭಾಮಸೇಫ್ ವತಯಿಯ ಪಿಡಿಓ ಅವರಿಗೆ ಮನವಿ

satyadarshana

ಸ್ಪಂದನಾ ಅಂತಿಮ ದರ್ಶನ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಗಣ್ಯರು.

satyadarshana

Leave a Comment