Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವಿದ್ಯಾರ್ಥಿಗಳ ಜೀವನ ರೂಪಿಸುವ ಗುರುವಿನ ಶ್ರಮ ದೊಡ್ಡದು

ವಿದ್ಯಾರ್ಥಿಗಳ ಜೀವನ ರೂಪಿಸುವ ಗುರುವಿನ ಶ್ರಮ ದೊಡ್ಡದು

ಎಸ್. ವಿ. ಪದವಿ ಪೂರ್ವ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ

ಬೆಳವಣಿಕಿ (ರೋಣ): ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೊಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ ಹಾಗಾಗಿ ಪ್ರತಿಯೊಬ್ಬರ ಬದುಕಿನಲ್ಲಿ ಬಾಳು ಬೆಳಗುವ ಗುರುವಿನ ಶ್ರಮ ದೊಡ್ಡದು ಎಂದು ಗದುಗಿನ ವೀರೇಶ್ವರ ಪುಣ್ಯಶ್ರಮದ ಕಲ್ಲಯ್ಯಜ್ಜನವರು ಹೇಳಿದರು.

ರೋಣ ತಾಲ್ಲೂಕಿನ ಬೆಳವಣಿಕಿ ಗ್ರಾಮದ ಎಸ್. ವಿ. ಪದವಿ ಪೂರ್ವ ಕಾಲೇಜಿನಲ್ಲಿ 1994-95 ನೇ ಸಾಲಿನ ಎಸ್. ಎಸ್. ಎಲ್. ಸಿ ಹಾಗೂ 1996-97ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಜರುಗಿದ ಗುರುವಂದನೆ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ. ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಪಡೆದಿದ್ದರೆ ಅದರ ಹಿಂದೆ ಪ್ರತಿಯೊಬ್ಬ ಗುರುವಿನ ಶ್ರಮ ಅಡಗಿರುತ್ತದೆ. ಅವರು ಸಂಪಾದಿಸಿದ ವಿದ್ಯೆಯನ್ನು ಧಾರೆ ಎರೆಯುವ ಮೂಲಕ ಕಟ್ಟಿದ ಜ್ಞಾನದಿಂದಲೆ ನಾವು ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂಬುದನ್ನು ಯಾರೂ ಮರೆಯಬಾರದು ಎಂದರು.

ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದೀಗ ಅಗತ್ಯವಿದೆ. ಆ ಮೂಲಕ ಈಗಿರುವ ವಿದ್ಯಾರ್ಥಿಗಳಿಗೂ ಸಾಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ನಿವೃತ್ತ ಪ್ರಾಚಾರ್ಯ ಕೆ. ವೈ. ಕೋರಿ ಮಾತನಾಡಿ, 35 ವರ್ಷಗಳ ನಂತರ ಮಾಡಿರುವ ಇದೊಂದು ಕಾರ್ಯಕ್ರಮ ಮಹಾಸಂಗಮವಾಗಿದೆ. ಇಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮತ್ತು ಕಾಲೇಜು ಹಂತದ ಎಲ್ಲರನ್ನು ಒಂದು ಕಡೆ ಸೇರಿಸಿದ್ದು ಶ್ಲಾಘನೀಯ ಅಷ್ಟೇ ಅಲ್ಲದೆ ವಯೋವೃದ್ಧರನ್ನು ಸನ್ಮಾನಿಸಿದ್ದು ಖುಷಿ ನೀಡಿದೆ ಎಂದರು.

ಅನೇಕ ಹಿರಿಯ ವಿದ್ಯಾರ್ಥಿಗಳ ತಮ್ಮ ಅನುಭವವನ್ನು ಹಂಚಿಕೊಂಡರು. ನಿವೃತ್ತ ಪ್ರಾಚಾರ್ಯ ಮೆಣಸಿಗೆ ಗುರುಗಳು, ಶಿಕ್ಷಕ ಐ . ಎಸ್. ಮೇಟಿ, ಎಸ್. ಆರ್. ಬಳಗಾನೂರಮಠ, ಎಂ. ವಿ. ಪೂಜಾರ, ಎ. ಎಂ. ಕೊಣ್ಣೂರ, ಮಂಜುಳಾ ಹೊಸಳ್ಳಿ, ಜ್ಯೋತಿ ಉಗಲಾಟ, ಉಮಾ ಹೊಸಂಗಡಿ, ಜ್ಯೋತಿ ಜಂತ್ಲಿ, ಬಿ. ಬಿ. ರಾಯರೆಡ್ಡಿ, ವಿಜಯಲಕ್ಷ್ಮೀ ಮರಿಗೌಡ್ರ, ಶಿವು ಹೊಸಂಗಡಿ, ಮಂಜು ರಿತ್ತಿ, ವೆಂಕಣ್ಣ ದಾದ್ಮಿ, ಹೇಮರೆಡ್ಡಿ ಹದ್ಲಿ ಇದ್ದರು.

6ರೋಣ1: ರೋಣ ತಾಲ್ಲೂಕಿನ ಬೆಳವಣಿಕಿ ಗ್ರಾಮದ ಎಸ್. ವಿ. ಪದವಿ ಪೂರ್ವ ಕಾಲೇಜಿನಲ್ಲಿ 1994-95 ನೇ ಸಾಲಿನ ಎಸ್. ಎಸ್. ಎಲ್. ಸಿ ಹಾಗೂ 1996-97ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು

Related posts

ಯಲಬುರ್ಗಾ ತಾಲೂಕಿನಲ್ಲಿ ಸರ್ಕಾರದ ನಿಯಮ ಉಲ್ಲಂಘನೆ ಪವನ​ ವಿದ್ಯುತ್ ಯಂತ್ರಗಳ ಅಳವಡಿಕೆ 

satyadarshana

ಹಸೆಮಣೆ ಏರಬೇಕಾದ ಯುವಕ ಮಸಣಕ್ಕೆ-ಮದುವೆ ಕಾಗದ ಹಂಚಲು ಹೋದಾಗ ಟ್ರ್ಯಾಕ್ಟರ್ ಡಿಕ್ಕಿ

satyadarshana

ಜನವರಿ 04 ರಂದು ಹೊಳ ಆಲೂರು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ..

satyadarshana

Leave a Comment