Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ

ಗದಗ: ರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆಯಾದರು.ನಾಮಪತ್ರ ಪರಿಶೀಲನೆ ನಂತರ ಚುನಾವಣೆ ನಡೆಯಿತು. ಒಟ್ಟು 69 ಮತದಾರರಿದ್ದು, ಅದರಲ್ಲಿ 68 ಮಂದಿ ಮತ ಚಲಾಯಿಸಿದರು. ಈ ಪೈಕಿ ನಾಗರಾಜ ಹಳ್ಳಿಕೇರಿ 13 ಮತಗಳನ್ನು ಪಡೆದರೆ; ಬಸವರಾಜ ಬಳ್ಳಾರಿ 55 ಮತಗಳನ್ನು ಪಡೆದು ವಿಜಯಶಾಲಿಯಾದರು.

ಬಸವರಾಜ ಬಳ್ಳಾರಿ ಅವರಿಗೆ ಚುನಾವಣಾ ಅಧಿಕಾರಿ ಪ್ರಮಾಣಪತ್ರ ನೀಡಿದರು.

ನೂತನ ಅಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ‘ಈ ಗೆಲವಿಗೆ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಮತ್ತು ಪದಾಧಿಕಾರಿಗಳು ಕಾರಣ’ ಎಂದು ಕೃತಜ್ಞತೆ ಸಲ್ಲಿಸಿದರು.

‘ನನ್ನ ಅವಧಿಯಲ್ಲಿ ನೌಕರರ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದರು.

ನಂತರ ಅವರ ಅಭಿಮಾನಿಗಳು ಹಾಗೂ ನೌಕರರ ವರ್ಗ ಅವರಿಗೆ ಅಭಿನಂದನೆ ಸಲ್ಲಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ ಮಾಡಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಘಟಕದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ನಾಗರಾಜ ಹಳ್ಳಿಕೇರಿ ಮತ್ತು ಬಸವರಾಜ ಬಳ್ಳಾರಿ ನಾಮಪತ್ರ ಸಲ್ಲಿಸಿದ್ದರು.

Related posts

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ನಿಮಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ನಲಿನ್ ಅತುಲ್

satyadarshana

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗಾಂಧೀಜಿ ಗ್ರಾಮ ಸ್ವರಾಜ್ಯ ಕನಸನ್ನು ನನಸಾಗಿಸಲು ಶ್ರಮಿಸೋಣ.ವೈಶಾಲಿ ಎಂ.ಎಲ್

satyadarshana

ಪರಿವರ್ತನಾ ಯುಗದ ಪ್ರತಿ ಮೂರ್ತಿಗಳು 

satyadarshana

Leave a Comment