Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ತುಂಗಭದ್ರಾ ಡ್ಯಾಂ ನೀರು ಬಿಡುಗಡೆ;ಕಾಲುವೆ ಒಡೆದು ಅಪಾರ ಹಾನಿ

ಕೊಪ್ಪಳ :ತುಂಗಭದ್ರಾ ಜಲಾಶಯದಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಲೆಗೆ ನೀಡು ಬಿಡುಗಡೆ ಮಾಡಲಾಗಿದೆ. ಆದರೆ ನಾಲೆ ಒಡೆದು ರೈತರ ಜಮೀನಿಗೆ ನೀರು ನುಗ್ಗಿದ್ದು, ಒಂದು ಕಡೆ ನೀರು ವ್ಯರ್ಥವಾದರೆ ರೈತರಿಗೆ ಅಪಾರವಾದ ನಷ್ಟವಾಗಿದೆ.ಕೊಪ್ಪಳ ಹಾಗೂ ರಾಯಚೂರು ಜಿಲ್ಲೆ ವ್ಯಾಪ್ತಿಯ ಕೆರೆಗಳನ್ನು ತುಂಬಿಸಲಿಕ್ಕೆ ತುಂಗಭದ್ರಾ ಎಡದಂಡೆ ಕಾಲುವೆಯ ಮುಖಾಂತರ ನೀರು ಹರಿಸಲಾಗಿತ್ತು.ಮಂಗಳವಾರ ರಾತ್ರಿ ಕೊಪ್ಪಳ ತಾಲೂಕಿನ ಬಸ್ಸಾಪುರ ಹಾಗೂ ಬಂಡಿಹರ್ಲಾಪುರ ಗ್ರಾಮಗಳ ನಡುವಿನ 13ನೇ ಮೈಲಿಯಲ್ಲಿ ಕಾಲುವೆ ಒಡೆದಿದೆ.

ಘಟನಾ ಸ್ಥಳಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಪ್ಪಳ ಜಿಲ್ಲಾಧಿಕಾರಿಗಳು ಮತ್ತು ಸ್ಥಳದಲ್ಲಿದ್ದ ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತ ಗತಿಯಲ್ಲಿ ಕಾಲುವೆ ದುರಸ್ತಿ ಕಾಮಗಾರಿ ನಿರ್ವಹಿಸುವಂತೆ ಸಚಿವ ಶಿವರಾಜ ಎಸ್. ತಂಗಡಗಿ ಸೂಚನೆ ನೀಡಿದರು.

ನೀರು ಬಿಡುಗಡೆ ವೇಳಾಪಟ್ಟಿ: ಮಾರ್ಚ್ 12ರಂದು ತುಂಗಭದ್ರಾ ನದಿಯಿಂದ ನೀರು ಬಿಡುಗಡೆ ಮಾಡುವ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ತುಂಗಭದ್ರಾ ಜಲಾಶಯದಲ್ಲಿ 2025-26ನೇ ಜಲವರ್ಷದಲ್ಲಿ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಪ್ರಾದೇಶಿಕ ಆಯುಕ್ತರು, ಕಲಬುರಗಿ ವಲಯ ಕಲಬುರಗಿ ನಿಗದಿ ಪಡಿಸಿದ ವೇಳಾಪಟ್ಟಿಯಂತೆ ನೀರಿನ್ನು ಹರಿಸಲು ನಿರ್ಧಾರಿಸಲಾಗಿತ್ತು.

ಸಂಬಂಧಿಸಿದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ತಮ್ಮ ವ್ಯಾಪ್ತಿಯಲ್ಲಿನ ತೂಬುಗಳ ಗೇಟ್‌ಗಳ ಮುಖಾಂತರ ಕೆರೆಕಟ್ಟೆಗಳಲ್ಲಿ ಕುಡಿಯುವ ಸಲುವಾಗಿ ನೀರು ಶೇಖರಣೆ ಮಾಡಲು ಹಾಗೂ ನಿಗದಿತ ಪ್ರಮಾಣದ ನೀರನ್ನು 104 ಮೈಲ್ ವರೆಗೆ ಹರಿಸಿ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು.

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ (0 ರಿಂದ 104 ಮೈಲ್ ವರೆಗೆ) ಗೆ ಕುಡಿಯುವ ನೀರಿಗಾಗಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಮಾರ್ಚ್ 16 (ಸೋಮವಾರ ಬೆಳಗ್ಗೆ 8 ಗಂಟೆ) ರಿಂದ ಮಾರ್ಚ್ 27ರ (ಶುಕ್ರವಾರ ಬೆಳಗ್ಗೆ 8 ಗಂಟೆ) ವರೆಗೆ 2000 ಕ್ಯೂಸೆಕ್ಸ್ ನಂತೆ ಕುಡಿಯುವ ನೀರು ಹರಿಸಲಾಗುವುದು.

ಅದರಂತೆ, ಯರಮರಸ್ ವಿಭಾಗ ಮಾರ್ಚ್ 19, 20 & ಮಾ. 21ರ ವರೆಗೆ, ಸಿರವಾರ ವಿಭಾಗ ಮಾ. 21, 22 & 23 ರವರೆಗೆ, ಸಿಂದನೂರು ವಿಭಾಗ ಮಾ. 24, 25 & ಮಾ. 26ರ ವರೆಗೆ ಹಾಗೂ ವಡ್ಡರಹಟ್ಟಿ ವಿಭಾಗದ ಮಾ. 26 & ಮಾ. 27ರ ವರೆಗೆ ನೀರು ಹರಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿತ್ತು.

ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಕಾಲುವೆಯಲ್ಲಿ ಮತ್ತು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಜನಸಾಮಾನ್ಯರು ಅಥವಾ ರೈತರು ಬಳಸುವುದನ್ನು ಮತ್ತು ಎತ್ತಿಕೊಳ್ಳುವುದನ್ನು ನಿಷೇಧಗೊಳಿಸಲಾಗಿತ್ತು.

 

Related posts

ಶಿಗ್ಗಾವಿಯ ಸಿಎಂ ಮನೆವರೆಗೂ ಪಾದಯಾತ್ರೆ ಕೈಗೊಂಡ ಮಹಿಳೆಯರು

satyadarshana

ತಾಳೆ ಎಣ್ಣೆ ತುಟ್ಟಿ: ಭಾರತದಲ್ಲಿ ಏ.28ರ ನಂತರ ಪಾಮ್ ಆಯಿಲ್ ಏರಿಕೆ.

satyadarshana

ಸ್ವ ಸಹಾಯ ಸಂಘಗಳಿಂದ ಮಹಿಳೆಯರ ಸ್ವಾವಲಂಬಿ ಜೀವನ ಸಾಧ್ಯ- ಬಸವರಾಜ ಕಡಬಿನ.

satyadarshana

Leave a Comment