Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಪಡಿತರ ಅಕ್ಕಿ ಅಕ್ರಮ ಸಾಗಾಟ: ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು

ಗಂಗಾವತಿ. ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯೊಂದನ್ನು ಕನ್ನಡಪರ ಸಂಘಟನೆಗಳು ವಡ್ಡರಹಟ್ಟಿ ಕ್ಯಾಂಪ್ ಹತ್ತಿರದ ವಿ.ಆರ್.ಎಲ್ ಕಚೇರಿ ಮುಂಭಾಗದಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಮಾನ್ವಿಯಿಂದ ಕೂಕನಪಳ್ಳಿ ಕಡೆಗೆ ತೆರಳುತ್ತಿದ್ದ ಲಾರಿಗಳಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಣೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಂಘಟನೆಗಳ ಕಾರ್ಯಕರ್ತರು, ಶಂಕಿತ ಲಾರಿಯನ್ನು ತಡೆದು 112 ಸಹಾಯವಾಣಿ ಮೂಲಕ ಪೊಲೀಸರಿಗೆ ಮಾಹಿತಿ ನೀಡಿ ಹಸ್ತಾಂತರಿಸಿದರು.

ಆಹಾರ ಇಲಾಖೆ ಮತ್ತು ಪೊಲೀಸರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿದಾಗ, ಸುಮಾರು 50 ಕೆ.ಜಿ. ತೂಕದ 700 ಅಕ್ಕಿ ಚೀಲಗಳು ಪತ್ತೆಯಾಗಿದ್ದು, ಒಟ್ಟು 35 ಟನ್ ಅಕ್ಕಿ ಇರುವುದಾಗಿ ಅಂದಾಜಿಸಲಾಗಿದೆ. ಇದರಲ್ಲಿ ಪಿಡಿಎಸ್ ಅಕ್ಕಿ ಇರುವ ಶಂಕೆ ವ್ಯಕ್ತವಾಗಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಮಾನ್ವಿ ಮೂಲದ ಪ್ರಭಾವಿ ವ್ಯಕ್ತಿಯೊಬ್ಬರ ರೈಸ್ ಮಿಲ್‌ನಿಂದ ಪಡಿತರ ಅಕ್ಕಿಯನ್ನು ಪಾಲಿಶ್ ಮಾಡಿ ಬೇರೆ ರಾಜ್ಯಗಳಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಡಾ. ರಾಜಕುಮಾರ್ ಅಭಿಮಾನಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಆರೋಪಿಸಿದ್ದಾರೆ.

ಅಕ್ರಮ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಅಕ್ರಮ ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿವೈಎಸ್‌ಪಿ ಜೆ.ಎಸ್‌. ನ್ಯಾಮಗೌಡರ್ ತಿಳಿಸಿದ್ದಾರೆ.

Related posts

ಗದಗ ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

satyadarshana

ಸರ್ವರಿಗೂ ಸಮಾನವಾಗಿ ಅನ್ವಯವಾಗುವ ಹಕ್ಕುಗಳೆ ಮಾನವ ಹಕ್ಕುಗಳು .ಗುಗಲೊತ್ತರ್

satyadarshana

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿನೀಯ : ಅಕ್ಷಯ ಪಾಟೀಲ

satyadarshana

Leave a Comment