Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಇಂದು ಹುಲಿಗಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ

ಕೊಪ್ಪಳ ಮೇ 10 : ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ರೂ.1325.00 ಲಕ್ಷ ವೆಚ್ಚದಲ್ಲಿ ಆರಂಭಗೊಳ್ಳಲಿರುವ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಅಮ್ಮಾ ನಿಲಯದ 2ನೇ ಮತ್ತು 3ನೇ ಮಹಡಿ ನಿರ್ಮಾಣ ಕಾಮಗಾರಿ ಹಾಗೂ ಶೌಚಾಲಯ ಸ್ನಾನಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮೇ 11 ರಂದು ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹುಲಿಗಿ, ಜಿಲ್ಲಾಡಳಿತ ಕೊಪ್ಪಳ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.

ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರು ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮತ್ತು ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ. ರಾಜಶೇಖರ್ ಹಿಟ್ನಾಳ, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ. ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ್, ಶರಣಗೌಡ ಅನ್ನದಾನ ಗೌಡ ಪಾಟೀಲ ಬಯ್ಯಾಪುರ ಹಾಗೂ ಹೇಮಲತಾ ನಾಯಕ ಅವರು ಭಾಗವಹಿಸಲಿದ್ದಾರೆ. ಜೊತೆಗೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆ (ಕಾಡಾ), ಮುನಿರಾಬಾದ್ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ ಉಪಸ್ಥಿತರಿರುವರು.

ವಿಶೇಷ ಆಹ್ವಾನಿತರಾಗಿ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ವಸತಿ ಇಲಾಖೆಯ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ. ಮೋಹನ್ ರಾಜ್, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಶರತ್ ಬಿ., ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸಿ. ಸತ್ಯನಾರಾಯಣ, ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಆಗಮಿಸುವರು.

ಕಲಬುರಗಿಯ ಸಂಪರ್ಕ ಮತ್ತು ಕಟ್ಟಡ(ಈಶಾನ್ಯ ವಲಯ) ದ ಮುಖ್ಯ ಅಭಿಯಂತರರಾದ ಸುಭಾಷ್ ಎಲ್. ಶಿಕ್ಷಣಕರ್, ಬಳ್ಳಾರಿ ವೃತ್ತದ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರರಾದ ತಿಮ್ಮರಾಯಪ್ಪ, ಲೋಕೋಪಯೋಗಿ ಇಲಾಖೆಯ ಕೊಪ್ಪಳ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಪಿ. ಹೇಮಂತರಾಜ, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಯಂ.ಹೆಚ್. ಪ್ರಕಾಶ್ ರಾವ್ ಹಾಗೂ ಲೋಕೋಪಯೋಗಿ ಇಲಾಖೆಯ ಕೊಪ್ಪಳ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೆಂಕಟೇಶ ಜಿ.ಎ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Related posts

ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ.

satyadarshana

ಕೂಡಲೇ ಸ್ವಚ್ಛ ಮಾಡಬೇಕು ಎಂದು ಭಾಮಸೇಫ್ ವತಯಿಯ ಪಿಡಿಓ ಅವರಿಗೆ ಮನವಿ

satyadarshana

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ * ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ಸಚಿವರ ಭೇಟಿ: ವಿಶೇಷ ಪೂಜೆ

satyadarshana

Leave a Comment