Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದ 40 ಕ್ಕೂ ಹೆಚ್ಚು ಕಡೆ ದಾಳಿ: ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ `ಲೋಕಾ’ ಶಾಕ್‌ :

 

ಬೆಂಗಳೂರು, ಜೂ.16- ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಭ್ರಷ್ಟ ಅಧಿಕಾರಿಗಳ ಅಕ್ರಮ ಸಂಪತ್ತು ಬಯಲಿ ಗೆಳೆದಿದ್ದಾರೆ. ಅಕ್ರಮದ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಇಂದು ರಾಜ್ಯದ 40 ಕ್ಕೂ ಹೆಚ್ಚು ಕಡೆ ಕಾರ್ಯಾಚರಣೆ ಕೈಗೊಂಡು ಸರ್ಕಾರಿ ಅಧಿಕಾರಿಗಳ ಸ್ಥಿರಚರಾಸ್ತಿ, ಕೋಟ್ಯಂತರ ರೂ. ನಗದು, ವಿವಿಧ ವಲಯಗಳಲ್ಲಿ ಹೂಡಿಕೆ, ಚಿನ್ನಾಭರಣ ಸೇರಿದಂತೆ ಐಶಾರಾಮಿ ವಸ್ತುಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.

ಬೆಳಗಾವಿಯಲ್ಲಿ ಕೆಆರ್‌ಡಿಎಲ್‌ ಅಧೀಕ್ಷಕ ಎಂಜಿನಿಯರ್‌ ಸಣ್ಣ ಕೆಂಚಪ್ಪ ಅವರ ಮೂಲ ಚಿತ್ರದುರ್ಗ, ದಾವಣಗೆರೆ ಸೇರಿದಂತೆ 5ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ಹಳ್ಳಿಕೇಡಿ ಗ್ರಾಮದಲ್ಲಿರುವ ತೋಟದ ಮನೆ, ಹುಮ್ನಾಬಾದ್‌ನಲ್ಲಿರುವ 2 ವಾಣಿಜ್ಯ ಕಾಂಪ್ಲೆಕ್ಸ್ ಗಳ ಮೇಲೂ ದಾಳಿ ನಡೆದಿದೆ.

ಲೋಕಾಯುಕ್ತ ಎಸ್ಪಿ ಸಿದ್ಧರಾಜು ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ಅವರ ಮನೆಗೆ ಭೇಟಿ ನೀಡಿದ ಅಧಿಕಾರಿಗಳನ್ನು ಕಂಡು ಕುಟುಂಬಸ್ಥರು ಶಾಕ್‌ ಆಗಿದ್ದಾರೆ. ಮನೆಯಲ್ಲಿ ತಪಾಸಣೆ ವೇಳೆ ಆಸ್ತಿ ದಾಖಲೆಗಳು, ವಿದೇಶಿ ವಾಚ್‌ಗಳು ಸೇರಿದಂತೆ ಚಿನ್ನಾಭರಣ, ನಗದು ಪತ್ತೆಯಾಗಿದ್ದು, ಹಲವೆಡೆ ನಿವೇಶನಗಳನ್ನು ಹೊಂದಿರುವ ಮಾಹಿತಿ ಇದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ನ ನಿವೃತ್ತ ಸೂಪರಿಡೆಂಟೆಂಟ್‌ ಇಂಜಿನಿಯರ್‌ ನಿವಾಸದದಲ್ಲೂ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದು ಕುತೂಹಲ ಕೆರಳಿಸಿದೆ.

ಸ್ವತಃ ಲೋಕಾಯುಕ್ತ ಎಸ್ಪಿ ಸಿದ್ಧರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಇವರು ಕರ್ತವ್ಯದಲ್ಲಿದ್ದಾಗ ಅಕ್ರಮದ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಮೂಲತಃ ಬೀದರ್‌ನವರಾದ ಇವರ ಹುಮ್ನಾಬಾದ್‌ನಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ಇವರಿಗೆ ಹಳ್ಳಿಖೇಡ ಗ್ರಾಮದಲ್ಲಿ ತೋಟದ ಮನೆ ಹಾಗೂ ಹುಮ್ನಾಬಾದ್‌ನಲ್ಲೇ 2 ವಾಣಿಜ್ಯ ಕಾಂಪ್ಲೆಕ್‌್ಸಗಳಿರುವುದು ಗೊತ್ತಾಗಿದೆ.ಚಿಕ್ಕಮಗಳೂರಿನಲ್ಲಿ ಎಸಿಎಫ್‌ ಮೋಹನ್‌ ಅವರ ಕಚೇರಿ ಹಾಗೂ ಕಡೂರಿನಲ್ಲಿರುವ ಅವರ ನಿವಾಸ ಹಾಗೂ ಅವರ ಸಂಬಂಧಿಕರ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ತಿರುಮಲೇಶ್‌ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಇವರ ಮನೆಯಲ್ಲಿ ಕೆಲವು ಆಸ್ತಿ ದಾಖಲೆಗಳು ಪತ್ತೆಯಾಗಿವೆ. ಕೃಷಿ ಜಮೀನು ಹಾಗೂ ವಾಣಿಜ್ಯ ಮಳಿಗೆಗಳು ಕೂಡಾ ಹೊಂದಿರುವುದು ಗೊತ್ತಾಗಿದೆ. ಇವರ ಸಂಬಂಧಿಕರ ಹೆಸರಿನಲ್ಲಿ ರೆಸಾರ್ಟ್‌ ಕೂಡಾ ಇದೆ ಎಂದು ಹೇಳಲಾಗುತ್ತಿದ್ದು, ಅಪಾರವಾದ ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

 

Related posts

ಯಲಬುರ್ಗಾ ತಾಲೂಕಿನ ನ್ಯಾಯಾಂಗಕ್ಕೆ ಹೊಸ ಗರಿ; ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ನೂತನ ನ್ಯಾಯಾಲಯ ಕಟ್ಟಡ ಲೋಕಾರ್ಪಣೆ

satyadarshana

ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಇಂಡಿಯಾ ಅವರಿಂದ ಐತಿಹಾಸಿಕ ಸೂಡಿ ದೇವಸ್ಥಾನದ ನಾಗಕುಂಡ ಪುಷ್ಕರಣಿ ಸ್ಥಳ ವೀಕ್ಷಣೆ

satyadarshana

ಮುಂಬೈ ಗೆಲುವಿನಿಂದ ಆರ್‌ಸಿಬಿ ಪ್ಲೇ ಆಫ್ ಪ್ರವೇಶ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಿಂದ ಔಟ್

satyadarshana

Leave a Comment