Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಲಮೂಲಗಳ ಸ್ವಚ್ಛತೆಗೆ ಜಿ.ಪಂ ಸಿಇಒ ಸೂಚನೆ

ಕೊಪ್ಪಳ :ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ನೀರು ಸಂಗ್ರಹ ಮತ್ತು ನೀರಿನ ಮೂಲಗಳ ಸ್ವಚ್ಛತೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್‌ ನೇಗಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೊಪ್ಪಳ ವಿಭಾಗದ ಕಾರ್ಯಪಾಲಕ ಎಂಜಿನಿಯರರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಮಾತನಾಡಿದ ಅವರು,’ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಈ ಅವಧಿಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಹೆಚ್ಚಿರುತ್ತದೆ.

ಹಾಗಾಗಿ ನೀರಿನ ಮೂಲಗಳ ಸ್ವಚ್ಛತೆ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ಜಿಲ್ಲೆಯಾದ್ಯಂತ ಎಲ್ಲಾ ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಂಗ್ರಹಣೆ ಮೂಲಗಳ ಸ್ವಚ್ಛತೆಗೆ ಆದ್ಯತೆ ಕೊಡಬೇಕು’ ಎಂದರು.

‘ಯಾವುದಾದರೂ ಕೊಳವೆ ಮಾರ್ಗ ಒಡೆದು ಹೋಗಿದ್ದಲ್ಲಿ ಅದನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಬೋರ್‌ವೆಲ್‌ಗಳಲ್ಲಿ ಅಥವಾ ನೀರು ಪೂರೈಕೆ ಪೈಪ್‌ಗಳಲ್ಲಿ ಕಲುಷಿತ ನೀರು ಸೇರದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರನ್ನು ಕಡ್ಡಾಯವಾಗಿ ಪರೀಕ್ಷಿಸಿದ ಬಳಿಕವೇ ಪೂರೈಸಲು ಕ್ರಮ ವಹಿಸಬೇಕು. ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವಿಲ್ಲವೆಂದು ಕಂಡುಬಂದಲ್ಲಿ ತಕ್ಷಣ ಅಂತಹ ನೀರು ಪೂರೈಕೆ ತಡೆಯಲು ತ್ವರಿತ ಕ್ರಮವಹಿಸಬೇಕು. ಕುಡಿಯಲು ಯೋಗ್ಯವಿಲ್ಲದ ಬೋರ್‌ವೆಲ್‌ ಸ್ಥಗಿತಗೊಳಿಸಬೇಕು. ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕವೇ ನೀರು ಪೂರೈಸಬೇಕು’ ಎಂದು ನಿರ್ದೇಶನ ನೀಡಿದರು

ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ನಳದ ಸಂಪರ್ಕ ಕಲ್ಪಿಸಿ ನೀರು ಪೂರೈಕೆ ಮಾಡಲಾಗುತ್ತದೆ. ತಾಂತ್ರಿಕ ಕಾರಣಗಳಿಂದ ಕಾಮಗಾರಿ ಅಪೂರ್ಣಗೊಂಡಿದ್ದಲ್ಲಿ ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ವಹಿಸಿ. ಜಿಲ್ಲೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಂಡು ಸಮರ್ಪಕವಾಗಿ ನೀರು ಸರಬರಾಜು ಮಾಡಬೇಕು. ಕುಡಿಯುವ ನೀರು ಯೋಜನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪೈಕಿ ಬಾಕಿ ಇರುವ ಟ್ಯಾಂಕ್ ನಿರ್ಮಾಣ, ಪೈಪ್‌ಲೈನ್ ಅಳವಡಿಕೆ, ವಿದ್ಯುತ್ ಸಂಪರ್ಕ ಸೇರಿದಂತೆ ಇತರೆ ಮುಕ್ತಾಯ ಹಂತದ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ’ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೊಪ್ಪಳ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಮಹೇಶ ಶಾಸ್ತ್ರಿ ಹಾಗೂ ಸಿಬ್ಬಂದಿ ಇದ್ದರು..

 

Related posts

ಅವೈಜ್ಞಾನಿಕ ಕಾಮಗಾರಿ ಸಾರ್ವಜನಿಕರಿಗೆ ತೊಂದರೆ

satyadarshana

ಡಿಜಿಪಿಗೆ ಬರೆದ ಪತ್ರ, ವಾಟ್ಸಾಪ್‌ ಸ್ಕ್ರೀನ್‌ಶಾಟ್‌ ವೈರಲ್‌

satyadarshana

ಸತ್ಯದರ್ಶನ ಕನ್ನಡ ದಿನಪತ್ರಿಕೆ.07.04.2023

satyadarshana

Leave a Comment