Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ದಿ|| ಡಿ. ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆ-2026

ಗದಗ : ಆಗಸ್ಟ್ 18: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಶೋಷಿತರ ಸಮಗ್ರ ಅಭಿವೃದ್ಧಿಯ ಸಾಮಾಜಿಕ ಕ್ರಾಂತಿಯ ಹರಿಕಾರ, ನೊಂದವರ ನಂದಾದೀಪ, ಸಾಧನೆಗಳ ಸರದಾರ, ಧೀಮಂತ ನಾಯಕ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ|| ಡಿ. ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆಯ ಸಮಾರಂಭ ಕಾರ್ಯಕ್ರಮವನ್ನು ನಗರದ ಮುಳಗುಂದ ರೋಡ್ ಕನಕ ಭವನದಲ್ಲಿ ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರುಗಳು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಉನ್ನತ ಶಿಕ್ಷಣ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರಡ್ಡಿ ಕಾರ್ಯಕ್ರವನ್ನು ಉದ್ಘಾಟಿಸುವರು. ಗದಗ ಶಾಸಕ ಡಾ. ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ಶಾಸಕರುಗಳಾದ ಸಿ.ಸಿ.ಪಾಟೀಲ, ಡಾ.ಚಂದ್ರು ಲಮಾಣಿ, ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಹಾಗೂ ಅಶೋಕ ಮಂದಾಲಿ ಅವರುಗಳು ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಸಹಕಾರ ಸಂಘಗಳ ನಿಬಂಧಕರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ವಿ.ವೆAಕಟೇಶ , ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಜಾನಕಿ ಕೆ.ಎಂ. ಅವರುಗಳು ಆಗಮಿಸುವರು.

ರೋಣದ ತಾಲೂಕಾ ಹಿಂದುಳಿದ ವರ್ಗಗಳ ವಿಸ್ತಾಣಾಧಿಕಾರಿ ಪ್ರಭಾಕರ ಉಳ್ಳಾಗಡ್ಡಿ ಉಪನ್ಯಾಸ ನೀಡುವರು.

ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್ ಹಾಗೂ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೆಹಬೂಬ.ಎಮ್. ತುಂಬರಮಟ್ಟಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಮೆರವಣಿಗೆ: ದಿ|| ಡಿ.ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆಯ ನಿಮಿತ್ತ ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಪ್ರಾರಂಭವಾಗಿ ಮುಳಗುಂದ ರೋಡ್, ಮುಖಾಂತರ ದೋಬಿಘಾಟ್, ಕನಕ ಭವನದವರೆಗೆ ಬಂದು ತಲುಪುವುದು.

 

Related posts

ಫೆ.14 ರಿಂದ ಯಲಬುರ್ಗಾ ತಾಲೂಕಿನಲ್ಲಿ ವಾರ್ತಾ ಇಲಾಖೆಯಿಂದ ಬೀದಿ ನಾಟಕ ಕಾರ್ಯಕ್ರಮಗಳ ಪ್ರದರ್ಶನ

satyadarshana

ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ.

satyadarshana

ಸರ್ಕಾರ ರಚಿಸಲು ತಯಾರಿ ನಡೆಸಿದ ಕಾಂಗ್ರೆಸ್‌ * ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ವಹಿಸಿದ ಎಐಸಿಸಿ

satyadarshana

Leave a Comment