Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

ಕೊಪ್ಪಳ :ಸೆಪ್ಟೆಂಬರ್ 17,  ಕೊಪ್ಪಳ ಜಿಲ್ಲೆಯ ತಲಾ ಆದಾಯ ಹೆಚ್ಚಳ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಿ, ಅದರ ಅನುಷ್ಠಾನಕ್ಕೆ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಕರೆ ನೀಡಿದರು.

 

79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಸೆಪ್ಟೆಂಬರ್ 17ರಂದು ಕೊಪ್ಪಳ ಜಿಲ್ಲಾಡಳಿತ ಭವನದ ಆವರಣದಲ್ಲಿ ರಾಷ್ಟçಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ನಮ್ಮ ದೇಶಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರö್ಯ ಸಿಕ್ಕರೂ, ಅಂದಿನ ನಿಜಾಮರ ಆಡಳಿತದಲ್ಲಿದ್ದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ-ವಿಜಯನಗರ ಭಾಗಗಳಿಗೆ ಸ್ವಾತಂತ್ರö್ಯ ಲಭಿಸಿರಲಿಲ್ಲ. ಸ್ವಾಮಿ ರಮಾನಂದ ತೀರ್ಥರ ನೇತೃತ್ವದಲ್ಲಿ ಜಿ.ಕೆ. ಪ್ರಾಣೇಶಾಚಾರ್, ಬಂಗಾರ ಶೆಟ್ಟಿ, ಹಕೀಕತ್ ರಾವ್, ರಾಮಚಂದ್ರಪ್ಪ, ಎಸ್.ಪಿ. ಅವಧಾನಿ, ವಿಶ್ವನಾಥರೆಡ್ಡಿ ಮುದ್ನಾಳ್, ಪೋಲೂರು ಮಲ್ಲಪ್ಪ, ಚಂದ್ರಶೇಖರ ಪಾಟೀಲ್, ಶಿವಮೂರ್ತಿ ಸ್ವಾಮಿ ಅಳವಂಡಿ, ಚಟ್ನಳ್ಳಿ ವೀರಣ್ಣ ಸೇರಿದಂತೆ ಕೊಪ್ಪಳ, ಗಂಗಾವತಿ, ಕುಷ್ಟಗಿ, ಯಲಬುರ್ಗಾ ಭಾಗದ ಅನೇಕ ಮಹನೀಯರು ಹೋರಾಟ ನಡೆಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ನೇತೃತ್ವದಲ್ಲಿ ನಡೆದ ‘ಆಪರೇಷನ್ ಪೋಲೋ’ ಸೈನಿಕ ಕಾರ್ಯಾಚರಣೆಯ ಫಲವಾಗಿ 1948ರ ಸೆಪ್ಟೆಂಬರ್ 17ರಂದು ಈ ಭಾಗ ವಿಮೋಚನೆಗೊಂಡಿತು. ಇದಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರ ಹೆಸರುಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ ಎಂದರು.

ಮೈಸೂರು ಪ್ರಾಂತ್ಯಕ್ಕೆ ಹೋಲಿಸಿದರೆ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. 371(ಜೆ) ತಿದ್ದುಪಡಿ ಹಾಗೂ ಕೆಕೆಆರ್‌ಡಿಬಿ ಮೂಲಕ ಯೋಜನೆಗಳು ಜಾರಿಯಾಗುತ್ತಿದ್ದರೂ, ಕೊಪ್ಪಳ ಜಿಲ್ಲೆಯ ಪ್ರಸ್ತುತ ತಲಾ ಆದಾಯ 1,81,000 ರೂ.ಗಳಷ್ಟಿದ್ದು, ಕಲ್ಯಾಣ ಕರ್ನಾಟಕದ ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳಿಗಿಂತ ಮುಂದಿದ್ದರೂ ಬಳ್ಳಾರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳಿಗಿಂತ ಹಿಂದುಳಿದಿದೆ. ಹಾಗಾಗಿ ಜಿಲ್ಲೆಯ ಆರ್ಥಿಕತೆ ಬಲಪಡಿಸಲು, ತಲಾ ಆದಾಯವನ್ನು ಹೆಚ್ಚಿಸುವುದರ ಜೊತೆಗೆ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಅಧಿಕಾರಿಗಳು ಸಮಗ್ರ ಕ್ರಿಯಾಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ಇತರೆ ಕ್ಷೇತ್ರಗಳಿಗೆ ಮುಖ್ಯ ಒತ್ತು ನೀಡಬೇಕಿದ್ದು, ಸೇವಾ ವಲಯ ಹಾಗೂ ಉತ್ಪಾದನಾ ಕೈಗಾರಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಉದ್ಯೋಗಾವಕಾಶ ಹೆಚ್ಚಿಸಬೇಕು. ಜಿಲ್ಲೆಯ ಜಿಡಿಪಿಗೆ ಕೃಷಿ ಕ್ಷೇತ್ರದಿಂದ ಶೇ. 31 ರಷ್ಟು ಪಾಲು ಬರುತ್ತಿದ್ದು, ಕಟಾವಿನ ನಂತರದ ನಷ್ಟ ತಡೆಯಲು ಸೂಕ್ತ ಶೇಖರಣಾ ಘಟಕಗಳನ್ನು ಸ್ಥಾಪಿಸುವುದು ಹಾಗೂ ಮೌಲ್ಯವರ್ಧನೆ ಮಾಡುವುದು ಅತ್ಯವಶ್ಯಕವಾಗಿದೆ ಎಂದರು.

ಇದಲ್ಲದೆ ಜಿಲ್ಲೆಯು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ 25ನೇ ಸ್ಥಾನದಲ್ಲಿದ್ದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ ತರುವುದರೊಂದಿಗೆ ಕೆಕೆಆರ್‌ಡಿಬಿ ಕಾರ್ಯದರ್ಶಿಗಳು ನೀಡಿರುವ ಬೆಳವಣಿಗೆಯ ಗುರಿಯನ್ನು ತಲುಪಲು ಅಧಿಕಾರಿಗಳು ಮತ್ತು ಸಿಬ್ಬಂದಿ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿ.ಪಂ ಉಪ ಕಾರ್ಯದರ್ಶಿಗಳಾದ ಟಿ.ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಈಶ್ವರ ಸವಡಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಡಯಟ್ ಉಪನಿರ್ದೇಶಕರಾದ ಅನಂತಕುಮಾರ ಎ.ಎಸ್., ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಆರ್‌ಬಿಐ ನಿರ್ಮಾಣದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪಾತ್ರ ದೊಡ್ಡದು..

satyadarshana

ವರ್ಷಕ್ಕೊಮ್ಮೆಯಾದ್ರೂ ಗಟಾರ ಸ್ವಚ್ಛ ಮಾಡಲು ಆಗ್ರಹ

satyadarshana

ಪ್ರವಾಸೋದ್ಯಮ ಇಲಾಖೆಯ  ಹಣ ಅಕ್ರಮ ವರ್ಗಾವಣೆ ಪ್ರಮುಖ ಆರೋಪಿ ಬಂಧನ

satyadarshana

Leave a Comment