Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸರ್ಕಾರಿ ಕಾಲೇಜುಗಳು ಖಾಸಗಿ ಸಂಸ್ಥೆಗಳಿಗೆ ಕಮ್ಮಿ ಇಲ್ಲ

ಸರ್ಕಾರಿ ಕಾಲೇಜುಗಳು ಖಾಸಗಿ ಸಂಸ್ಥೆಗಳಿಗೆ ಕಮ್ಮಿ ಇಲ್ಲ

ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಕೆಎಂಡಿಸಿಯಿಂದ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮ

ಕೆಎಂಡಿಸಿ ಸಿಎಸ್‌ಆರ್ ಅನುದಾನದಿಂದ ಗ್ರಾಮೀಣ ಪ್ರತಿಭೆಗಳಿಗೆ ಶಕ್ತಿ ತುಂಬುವ ಕಾರ್ಯ

ನರೇಗಲ್:‌ ʼಸರ್ಕಾರಿ ಕಾಲೇಜುಗಳು ಗುಣಮಟ್ಟ ಮತ್ತು ಸೌಲಭ್ಯಗಳಲ್ಲಿ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಕಮ್ಮಿ ಇಲ್ಲದಂತೆ ರೂಪಿಸಲಾಗುವುದು. ಇಲ್ಲಿ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಯಾವುದೇ ಕೊರತೆ ಎದುರಾಗದಂತೆ ಶ್ರೇಷ್ಠ ಮಟ್ಟದ ಶೈಕ್ಷಣಿಕ ವಾತಾವರಣ ಒದಗಿಸಲು ಸರ್ಕಾರ ಬದ್ಧವಾಗಿದೆʼ ಎಂದು ರೋಣ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ತಿಳಿಸಿದರು.

ನರೇಗಲ್‌ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ (ಕೆಎಂಡಿಸಿ) ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್‌ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಭಾಧ್ಯಕ್ಷರಾಗಿರುವ ನಮ್ಮ ಕ್ಷೇತ್ರದ ಶಾಸಕರಾದ ಜಿ.ಎಸ್. ಪಾಟೀಲರು ಕ್ಷೇತ್ರದ ಎಲ್ಲಾ ಸರ್ಕಾರಿ ಕಾಲೇಜುಗಳ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸರ್ವಾಂಗೀಣ ಪ್ರಗತಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರು ಈ ಹಿಂದೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಿಎಸ್‌ಆರ್ ಅನುದಾನದಡಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕಾಲೇಜಿಗೆ ₹9 ಲಕ್ಷ ಮೌಲ್ಯದ ಅತ್ಯಾಧುನಿಕ ಕಂಪ್ಯೂಟರ್‌ಗಳನ್ನು ಒದಗಿಸಲಾಗಿದ್ದು, ಇವುಗಳ ಸದ್ಬಳಕೆಯಿಂದಾಗಿ ಕಾಲೇಜಿನ 78ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ಮಹಿಳೆಯರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ, ರೋಣ ಮತಕ್ಷೇತ್ರದ ಮಹಿಳೆಯರಿಗೆ ಗರ್ಭಕೋಶದ ಕಾಯಿಲೆ ತಡೆಗಟ್ಟಲು ಉಚಿತ ಲಸಿಕೆ ವಿತರಿಸಲಾಗಿದೆ. ಗ್ರಾಮೀಣ ಭಾಗದ ಯುವಜನತೆಯ ಭವಿಷ್ಯ ರೂಪಿಸಲು ಸಾವಿರಾರು ಆಕಾಂಕ್ಷಿಗಳಿಗೆ 2 ತಿಂಗಳುಗಳ ಕಾಲ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಸಾಯಿಬಾಬಾ ದೇವಸ್ಥಾನದ ಮಾರ್ಗದಿಂದ ಕಾಲೇಜಿನವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಈಗಾಗಲೇ ₹3 ಕೋಟಿ ಅನುದಾನ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಹೆಚ್ಚುತ್ತಿರುವ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಕಂಪ್ಯೂಟರ್‌ಗಳ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕಾಲೇಜಿನಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ವಿದ್ಯಾರ್ಥಿಗಳು ಇಂತಹ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ದೇಶದ ಜವಾಬ್ದಾರಿಯುತ ಹಾಗೂ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಕಸ್ತೂರೆವ್ವ ದಳವಾಯಿ ಮಾತನಾಡಿ, ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಧ್ಯಕ್ಷರೂ ಆಗಿರುವ ಶಾಸಕ ಜಿ.ಎಸ್. ಪಾಟೀಲರು ಕಾಲೇಜಿನ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಅಗತ್ಯಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ಸಾಧನೆ ತೋರುವ ಮೂಲಕ ಈ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ 300 ಪದವಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್‌ಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ರೋಣ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ನಂತರ ಸಮೀಪದ ಸರ್ಕಾರಿ ಕಾಲೇಜಿನಲ್ಲೂ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಯಿತು.

ವೇದಿಕೆ ಮೇಲೆ ಗಜೇಂದ್ರಗಡ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶರಣಪ್ಪ ಬೆಟಗೇರಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಎಂ.ಎಸ್. ಧಡೇಸೂರಮಠ, ಅಲ್ಲಾಬಕ್ಷಿ ನದಾಫ್ ಇದ್ದರು ಹಾಗೂ ಕಾರ್ಯಕ್ರಮದಲ್ಲಿ ಪ್ರಮುಖರಾದ ಕುಮಾರಸ್ವಾಮಿ ಕೋರಧಾನ್ಯಮಠ, ಸಂತೋಷ ಹನಮಸಾಗರ, ಮೈಲಾರಪ್ಪ ವೀ. ಚಳ್ಳಮರದ, ಮುತ್ತಪ್ಪ ನೂಲ್ಕಿ, ಕಳಕನಗೌಡ ಪೊಲೀಸ್‌ಪಾಟೀಲ, ಶೇಖಪ್ಪ ಕೆಂಗಾರ, ಈರಪ್ಪ ಜೋಗಿ, ಖಾದರಬಾಷಾ ಹೂಲಗೇರಿ, ಶರಣು ಗೋಧಿ ಸೇರಿದಂತೆ ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನರೇಗಲ್‌ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್‌ಗಳನ್ನು ವಿತರಿಸಲಾಯಿತು  ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ವತಿಯಿಂದ ಗುರುವಾರ ನಡೆದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್‌ ವಿತರಣೆ ಕಾರ್ಯಕ್ರಮದಲ್ಲಿ ರೋಣ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಅವರನ್ನು ಸನ್ಮಾನಿಸಲಾಯಿತು

Related posts

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ಘೋಷಣೆ ಬೆನ್ನಲ್ಲೇ ಸಿ.ಎಂ. ಉದಾಸಿ ಪುತ್ರ ಶಿವಕುಮಾರ್ ಉದಾಸಿ ಬಿಜೆಪಿ ಟಿಕೆಟ್​ಗಾಗಿ ಕಸರತ್ತು

satyadarshana

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕುಂಟೋಜಿ ಗ್ರಾಮದಲ್ಲಿ ಉಚಿತ ವೈದ್ಯಕೀಯ ಶಿಬಿರ 

satyadarshana

ʼಸಾಧನೆ ಶಿಖರವನ್ನೇರಲು ಪಣ ತೊಡಿʼ ʼದೇಶ ಮೆಚ್ಚುವಂತ ಸಾಧನೆ ಮಾಡಲು ಮುಂದಾಗಿʼ ʼಜ್ಞಾನದ ಜೊತೆಗೆ ಸಾಮಾಜಿಕ ಕಳಕಳಿ ಇರಲಿʼ

satyadarshana

Leave a Comment