Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕರ್ನಾಟಕ ಪಶ್ಚಿಮ ಪದವಿಧರ ಮತಕ್ಷೇತ್ರದ ಚುನಾವಣೆ-2026: ಸೆ.29ರಂದು ಅಧಿಸೂಚನೆ ಪ್ರಕಟ

ಗದಗ, ಸೆ.22: ಭಾರತ ಚುನಾವಣಾ ಆಯೋಗವು ಕರ್ನಾಟಕ ಪಶ್ಚಿಮ ಪದವಿಧರ ಮತಕ್ಷೇತ್ರದ ಚುನಾವಣೆ-2026 ಕುರಿತಂತೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 29ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಪಶ್ಚಿಮ ಪದವಿಧರ ಮತಕ್ಷೇತ್ರದ ಚುನಾವಣಾಧಿಕಾರಿ ಕೆ‌ ಎಮ್ ಜಾನಕಿ ಅವರು ತಿಳಿಸಿದ್ದಾರೆ.

ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 6ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 9ರಂದು ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 27ರಂದು ಮತಗಳ ಎಣಿಕೆ ನಡೆಯಲಿದ್ದು, ಅಕ್ಟೋಬರ್ 31ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಚುನಾವಣಾ ಪ್ರಕ್ರಿಯೆಯನ್ನು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.

ಚುನಾವಣಾ ವ್ಯಾಪ್ತಿಯ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಸೇರಿದಂತೆ ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಪೊಲೀಸ್ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳು ಚುನಾವಣಾ ಪ್ರಕ್ರಿಯೆಗೆ ಅಗತ್ಯ ಸೂಕ್ತ ಕ್ರಮ ವಹಿಸಲು ತಿಳಿಸಲಾಗಿದೆ ಎಂದು ಕರ್ನಾಟಕ ಪಶ್ಚಿಮ ಪದವಿಧರ ಮತಕ್ಷೇತ್ರದ ಚುನಾವಣಾಧಿಕಾರಿ ಕೆ‌ ಎಮ್ ಜಾನಕಿ ಅವರು ತಿಳಿಸಿದ್ದಾರೆ.

Related posts

ಮುಂಡರಗಿ : ಪಶು ಆಸ್ಪತ್ರೆಗಳಿಗೆ ‌ಬೇಕಿದೆ ‘ಚಿಕಿತ್ಸೆ’

satyadarshana

ನಗರದ ಟ್ಯಾಗೋರ ರಸ್ತೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ

satyadarshana

ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ ಎಸಿಬಿ ಬಲೆಗೆ.

satyadarshana

Leave a Comment