Satya Darshana
ಬಿಸಿ ಬಿಸಿ ಸುದ್ದಿ
ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಪ್ಪನ ಸಮಾಧಿಯ ಪಕ್ಕದಲ್ಲಿಯೇ ಮಗನ ಅಂತ್ಯಸಂಸ್ಕಾರ * ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರ

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ
ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರವನ್ನು  ಭಾನುವಾರ(ಅ.31) ಕಂಠೀರವ ಸ್ಟುಡಿಯೋ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಂಠೀರವ ಸ್ಡುಡಿಯೋ ಆವರಣದಲ್ಲಿರುವ ಡಾ ರಾಜ್ ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದು, ಇಂದು  (ಅ.30) ಇಡೀ ದಿನ ಕಂಠೀರವ ಸ್ಟುಡಿಯೋದಲ್ಲಿ ಸಾರ್ವಜನಿಕರ ಅಂತಿಮ  ದರ್ಶನ
ಅಭಿಮಾನಿಗಳ ಸಾಗರ

 

ಪುನೀತ್ ರಾಜ್​ಕುಮಾರ್ ಅವರ ಹಠಾತ್​ ನಿಧನ ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ಲಕ್ಷಾಂತರ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ನಟ-ನಟಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ. ಇನ್ನು ಕಂಠೀರವ ಸ್ಟುಡಿಯೋ ದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದ್ದು, ಪುನೀತ್ ರಾಜ್‌ಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಅಭಿಮಾನಗಳ ಸಾಗರವೇ ಹರಿದುಬರುತ್ತಿದೆ. ಇದರಿಂದ ಸಾಕಷ್ಟು ನೂಕುನುಗ್ಗಲು ಉಂಟಾಗಿದ್ದು, ಅದನ್ನು ತಡೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.
ನಗರಾದ್ಯಂತ ಫುಲ್ ಟೈಟ್ ಸೆಕ್ಯೂರಿಟಿ
ನಗರಾದ್ಯಂತ 6 ಸಾವಿರ ಪೊಲೀಸರು, ಕೆಎಸ್ಆರ್‌ಪಿ KSRP ಪ್ಲಟೂನ್ ನಿಯೋಜನೆ ಮಾಡಲಾಗಿದ್ದು, ಭಾನುವಾರ ಮಧ್ಯ ರಾತ್ರಿ ವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಎಷ್ಟೇ ಜನ ಬಂದ್ರೂ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತೆ. ಈ ಸಂದರ್ಭದಲ್ಲಿ ಕುಚೇಷ್ಟೇ ಮಾಡಿದ್ರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕಮಿಷನರ್ ಕಮಲ್ ಪಂಥ್ ಎಚ್ಚರಿಕೆ ಕೊಟ್ಟಿದ್ದಾರೆ.
ಪುನೀತ್ ಅವರ ನಿವಾಸದ ಬಳಿ ಯಾರೂ ತೆರಳದಂತೆ ಸರಕಾರ ಮನವಿ ಮಾಡಿದ್ದು, ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗ ಬೇಡಿ. ಶಾಂತ ರೀತಿಯಲ್ಲಿ ಇರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

Related posts

ಶಿಥಿಲಾವಸ್ಥೆಯಲ್ಲಿರುವ ಶಾಲಾ, ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಿ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶೀಖಾ

satyadarshana

ಕೋಟಿಗೊಬ್ಬ 3 ಹಾಗೂ ಸಲಗ ಸಿನಿಮಾ: ಅಕ್ಟೋಬರ್ 14ಕ್ಕೆ ಬಿಡುಗಡೆ,

satyadarshana

ಗಜೇಂದ್ರಗಡ ಜೆಡಿಎಸ್ ಕಚೇರಿಯಲ್ಲಿ ಎಚ್.ಡಿ.ದೇವೇಗೌಡರ ಜನ್ಮದಿನ ಆಚರಣೆ

satyadarshana

Leave a Comment