Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಕೇಂದ್ರ ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದ ಪ್ರಧಾನಿ ಮೋದಿ ನಿರ್ಧಾರ ಸ್ವಾಗತಾರ್ಹ.ಎಂ.ವಾಯ್ ಮುಧೋಳ

ಸತ್ಯ ದರ್ಶನ

ಗದಗ: ನ- 19 .ರೈತರ ಆಕ್ರೋಶಕ್ಕೆ ಗುರಿಯಾಗಿದೆ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ . ನಿಜವಾಗಿಯೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ .

ರೈತರ ಬದುಕಿಗೆ ಮತ್ತು ದೇಶದ ಕೃಷಿ ವ್ಯವಸ್ಥೆಗೆ ದಮನಕಾರಿ ಆಗಿದ್ದ ಮತ್ತು ಮಣ್ಣಿನ ಮಕ್ಕಳ ಚಾರಿತ್ರಿಕ ಪ್ರತಿಭಟನೆಗೆ ಕಾರಣವಾಗಿದ್ದ, ಮೂರು ದಮನಕಾರಿ ಕೃಷಿ ಕಾಯಿದೆಗಳನ್ನು ದಿಢೀರ್ ಹಿಂದಕ್ಕೆ ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಒತ್ತಡಕ್ಕೆ ಮಣಿದು, ರೈತ ಶಕ್ತಿಗೆ ತಲೆ ಬಾಗಿದ್ದಾರೆ

ಒಂದು ವರ್ಷ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನದಾತರು ಮಳೆ , ಚಳಿ , ಬಿಸಿಲೆನ್ನದೇ ಪ್ರತಿಭಟನೆ ನಡೆದಿದೆ . ತಮ್ಮ ಜೀವ ಜೀವನವನ್ನು ಪಣಕ್ಕಿಟ್ಟು ಹೋರಾಡಿದರು ಇದರ ಪ್ರತಿಫಲವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಈ 3 ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ . ಆದ್ದರಿಂದ ಗಜೇಂದ್ರಗಡ ತಾಲ್ಲೂಕ ಜೆಡಿಎಸ್ ಅಧ್ಯಕ್ಷರಾದ   ಎಂ.ವಾಯ್ ಮುಧೋಳ ( ಸಾಗರ್ ) ಅವರ ಪರವಾಗಿ ದೇಶದ ಎಲ್ಲ ರೈತರಿಗೆ ಅಭಿನಂದನೆಗಳು . ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಹೇಳಿದರು

Related posts

ಡಿ.ದೇವರಾಜ ಅರಸು ಭವನ ಹಾಗೂ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ಲೋಕಾರ್ಪಣೆ

satyadarshana

satyadarshana

ಮತದಾನ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಜಿಲ್ಲಾಧಿಕಾರಿ ಅವರಿಂದ ಪ್ರತಿಜ್ಞಾ ವಿಧಿ ಬೋಧನೆ

satyadarshana