Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ಸತ್ಯ ದರ್ಶನ

ಗದಗ : ನ 19 . ಸಾಲಾಸೂಲ ಮಾಡಿದ ಕಷ್ಟಪಟ್ಟು ಬೆಳೆದ ಬೆಳೆ ಹಾನಿ ಕಂಡು ರೈತವರ್ಗ ಕಂಗಾಲಾಗಿದೆ. ಮಳೆರಾಯನ ಅಬ್ಬರಕ್ಕೆ ಜನರ ಜೀವನ ಅಸ್ತವ್ಯಸ್ತಗೊಂಡಿದೆ.

ಮೊದಲ ಮೂರು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಂತರದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳು ಮಳೆ ಸಾಧ್ಯತೆ ಇದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ನಾಳೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇವತ್ತು ಬೆಳಗಾವಿ, ಧಾರವಾಡ, ಗದಗ, ಹಾವೇರಿ,ರಾಯಚೂರು ಜಿಲ್ಲೆಗಳಿಗೆ ಯಲ್ಲೊ ಅಲರ್ಟ್, ನಾಳೆ ಧಾರವಾಡ, ಹಾವೇರಿ ಗದಗ ಕೊಪ್ಪಳ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನಲ್ಲೂ ಮುಂದಿನ ಮೂರು ದಿನ ವ್ಯಾಪಕ ಮಳೆ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಇಂದು ಬಳ್ಳಾರಿಗೆ ಯಲ್ಲೋ, ಉಳಿದೆಲ್ಲ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ.ನಾಳೆ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ ರಾಮನಗರ,ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದ್ದು, ಮೂರನೇ ದಿನ ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ,ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Related posts

ಅಕ್ರಮವಾಗಿ ಮರಳು ಸಾಗಾಟ ಭೂ ವಿಜ್ಞಾನಿ ನಾಗರಾಜು ಚಾಲಕ ಸಚಿನ್‌ ಗೌರಿಪುರ ಮೇಲೆ ಹಲ್ಲೆ

satyadarshana

ಮುರುಘಾ ಮಠ ಪ್ರದಾನ ಮಾಡಿದ್ದ ‘ಬಸವಶ್ರೀ ಪ್ರಶಸ್ತಿ’, 5 ಲಕ್ಷ ರೂ. ನಗದು ವಾಪಸ್‌: ಪತ್ರಕರ್ತ ಪಿ.ಸಾಯಿನಾಥ್;

satyadarshana

ಕಳಪೆ ಕಾಮಗಾರಿ ತಪಾಸಣೆಗೆ ಆಗ್ರಹ

satyadarshana

Leave a Comment