Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಕಟಾವು ಮಾಡಿ ಕಣದಲ್ಲಿಟ್ಟು ಬೆಳೆ ಕಳೆದುಕೊಂಡವರಿಗೆ ನಷ್ಟ’ ಕೊಳೆತ ಬೆಳೆಗಳಿಗೆ ಸಿಗಲ್ಲ ಸರ್ಕಾರದ ಪರಿಹಾರ!

ಸತ್ಯ ದರ್ಶನ
ಕೊಪ್ಪಳ.   ನವೆಂಬರ್‌ ತಿಂಗಳು ಕಟಾವು ಮತ್ತು ರಾಶಿ ಮಾಡುವ ಸಮಯ. ಈ ಸಮಯದಲ್ಲಿ ಎಡೆ ಬಿಡದೆ ಸುರಿದ ಮಳೆಯಿಂದ ರಾಜ್ಯದ ವಿವಿಧೆಡೆ ಭತ್ತ  ಮೆಕ್ಕೆಜೋಳ, ಈರುಳ್ಳಿ  ಮೆಣಸಿನ ಕಾಯಿ ಸೇರಿದಂತೆ ಬಹುತೇಕ ಬೆಳೆಗಳು ಕಣದಲ್ಲಿಯೇ ಮೊಳಕೆಯೊಡೆದಿವೆ ಅಥವಾ ಕೊಳೆತು ಹೋಗಿವೆ. ಬೆಳೆ ಬೆಳೆಯಲು ಮಾತ್ರವಲ್ಲದೆ ಕಟಾವಿಗೂ ಖರ್ಚು ಮಾಡಲಾಗಿದ್ದು, ಇಂಥ ರೈತರ ಹಾನಿಗೆ ಪರಿಹಾರ ಕೊಡುವರಾರು ಎಂದು ಅನ್ನದಾತರು ಕಣ್ಣೀರಿಡುತ್ತಿದ್ದಾರೆ.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿ ನಿಯಮಾನುಸಾರ ಕೇವಲ ಹೊಲದಲ್ಲಿ ಬೆಳೆ ಹಾನಿಯಾಗಿರುವುದನ್ನು ಸಮೀಕ್ಷೆ ಮಾಡಲಾಗುತ್ತದೆ. ಆದರೆ, ಕಣದಲ್ಲಿ ಕೊಳೆತಿರುವ ಬೆಳೆ ಹಾನಿಯ ಲೆಕ್ಕಾಚಾರ ಮಾಡುವುದಕ್ಕೆ ಮತ್ತು ಪರಿಹಾರ ನೀಡುವುದಕ್ಕೆ ನಿಯಮದಲ್ಲಿ ಅವಕಾಶವೇ ಇಲ್ಲ.
ಬಹುತೇಕ ಕಣದಲ್ಲಿ: ಭತ್ತ ಶೇ.10-20ರಷ್ಟುರಾಶಿ ಮಾಡಿದ್ದರೆ ಶೇಂಗಾ, ಮೆಕ್ಕೆಜೋಳ, ಒಣ ಮೆಣಸಿನಕಾಯಿ  ಸೇರಿದಂತೆ ಬಹುತೇಕ ಬೆಳೆಗಳು ಕಣದಲ್ಲಿ ಕೊಳೆತಿವೆ. ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದ ನಿವಾಸಿ ವೆಂಕಣ್ಣ ಗೋವಿಂದಗೌಡ್ರ ಸುಮಾರು 9 ಎಕರೆಯಲ್ಲಿ ಮೆಕ್ಕಜೋಳ ಹಾಕಿದ್ದಾರೆ. ಭರ್ಜರಿಯಾಗಿಯೇ ಬೆಳೆ ಬಂದಿದೆ. ಕಟಾವು ಮಾಡಿ, ರಾಶಿ ಮಾಡುವ ವೇಳೆಯಲ್ಲಿ ಕಾಡಿದ ಮಳೆಯಿಂದ ಅರ್ಧ ಕೊಳೆತು ಹೋಗಿದ್ದರೆ ಇನ್ನರ್ಧ ಕಣದಲ್ಲಿ ರಾಶಿ ಮಾಡಿದ್ದರೂ ಮೊಳಕೆಯೊಡೆದು ಹೋಗಿದೆ.
ಮೆಕ್ಕೆಜೋಳ ತೆನೆ ಮುರಿದು ಹಾಕಿದ ಮೇಲೆ ಹೊಲದಲ್ಲಿ ಅದನ್ನು ರಾಶಿ ಮಾಡುವುದಕ್ಕೂ ಅವಕಾಶ ಸಿಗದೆ ಇರುವುದರಿಂದ ಹೊಲದಲ್ಲಿಯೇ ಕೊಳೆತು ಹೋಗಿದೆ. ಕೊಪ್ಪಳ ಬೈಪಾಸ್‌ ರಸ್ತೆಯಲ್ಲಿ ಹಾಗೆ ಸುಮ್ಮನೆ ಸಂಚಾರ ಮಾಡಿದರೆ ಸಾಕು ದಾರಿಯುದ್ದಕ್ಕೂ ಮೆಕ್ಕೆಜೋಳದ ರಾಶಿಗಳು ಇವೆ. ಇವುಗಳಲ್ಲಿ ಶೇ.80-90ರಷ್ಟು ಮೊಳಕೆಯೊಡೆದಿವೆ. ಕೊಪ್ಪಳ  ಜಿಲ್ಲೆಯೊಂದರಲ್ಲಿಯೇ. ಸುಮಾರು 60-70 ಸಾವಿರ ಎಕರೆ ಪ್ರದೇಶದಲ್ಲಿನ ಮೆಕ್ಕೆಜೋಳ ಕಟಾವು ಆದ ಮೇಲೆ ಹಾಳಾಗಿದೆ. ಇನ್ನು 300 ಎಕರೆ ಪ್ರದೇಶದಲ್ಲಿನ ಈರುಳ್ಳಿ  ಕಟಾವು ಮಾಡಿ, ಕಣದಲ್ಲಿ ಹಾಕಿದ ಮೇಲೆ ಕೊಳೆತು ಹೋಗಿದೆ.
ಪರಿಹಾರಕ್ಕೆ ಅವಕಾಶವಿಲ್ಲ : ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ನಿಯಮಾನುಸಾರ ಹೊಲದಲ್ಲಿ ಹಾನಿಯಾಗಿರುವ ಬೆಳೆಗೆ ಮಾತ್ರ ಪರಿಹಾರ ನೀಡಲು ಅವಕಾಶ ಇದೆ. ಹೀಗಾಗಿ ಹೊಲದಲ್ಲಿ ಆಗಿರುವ ಹಾನಿಯ ಸರ್ವೇ ಮಾಡಲಾಗುತ್ತದೆ. ಆದರೆ ರಾಶಿ ಮಾಡುವ ವೇಳೆಯಲ್ಲಿ ಕಣದಲ್ಲಿ ಆಗಿರುವ ಹಾನಿಗೆ ಪರಿಹಾರ ನೀಡುವುದಕ್ಕೆ ನಿಯಮದಲ್ಲಿ ಅವಕಾಶ ಇಲ್ಲ.
ಸದಾಶಿವ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಕೊಪ್ಪಳ
ಏಕೆ ಸಿಗಲ್ಲ ಪರಿಹಾರ?
ಪ್ರಕೃತಿ ವಿಕೋಪದಿಂದ ಬೆಳೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡುತ್ತದೆ
ಎಸ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ನಿಯಮಾನುಸಾರ ಪರಿಹಾರ ಕೊಡಲಾಗುತ್ತದೆ
ಹೊಲದಲ್ಲಿ ಬೆಳೆ ಹಾನಿಯಾಗಿದ್ದರೆ ಸಮೀಕ್ಷೆ ನಡೆಸಿ ಪರಿಹಾರ ನೀಡಿ ಎನ್ನುತ್ತದೆ ನಿಯಮ
ಆದರೆ ಕಣದಲ್ಲಿ ಕೊಳೆತಿರುವ ಬೆಳೆಯ ಹಾನಿ ಲೆಕ್ಕಾಚಾರ, ಪರಿಹಾರಕ್ಕೆ ಅವಕಾಶವಿಲ್ಲ
ಇದು ಕಟಾವಿನ ತಿಂಗಳು. ಸಾಕಷ್ಟುರೈತರು ಬೆಳೆ ಕೊಯ್ಲು ಮಾಡಿ ಕಣದಲ್ಲಿಟ್ಟಿದ್ದಾರೆ
ಅಷ್ಟರಲ್ಲಿ ಸತತ ಮಳೆ ಸುರಿದ ಕಾರಣ ಬೆಳೆಗಳು ಮೊಳಕೆಯೊಡೆದಿವೆ, ಕೊಳೆತಿವೆ
ಬೆಳೆ ಬೆಳೆಯಲು, ಕಟಾವು ಮಾಡಲು ಹಣ ವ್ಯಯಿ

Related posts

ಬಾಣಂತಿಯರ ಸಾವು, ದಾರಿ ತಪ್ಪಿಸಿ ನುಣುಚಿಕೊಳ್ಳುತ್ತಿರುವ ಆರೋಗ್ಯ ಸಚಿವರು ಕೆ ಆರ್ ಎಸ್ ಪಕ್ಷದ ಆರೋಪ

satyadarshana

ಚೆಕ್ ಪೋಸ್ಟಗಳಿಗೆ ಅನೀರಿಕ್ಷಿತ ಭೇಟಿ ನೀಡಿದ ಡಾ.ಸುಶೀಲಾ ಬಿ

satyadarshana

ಸಿಂಗಟಾಲೂರು ಏತ ನೀರಾವರಿ ಯೋಜನೆ ಹಿನ್ನೀರಿಗೆ ಭೂಮಿ ಕಳೆದುಕೊಂಡ ರೈತರ ಪ್ರತಿಭಟನೆ

satyadarshana