Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ವಿಧಾನ ಪರಿಷತ್ ಚುನಾವಣೆಯಲ್ಲಿʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ.ಎಚ್‌ಡಿಕೆ

ಸತ್ಯದರ್ಶನ

ಬೆಂಗಳೂರು: ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲನುಭವಿಸಿದರ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ಜೆಡಿಎಸ್ ಹಿನ್ನಡೆ ಅನುಭವಿಸಿದೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಾಟ ನಡೆಸಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದೆ ಹೇಳಿರುವ ಹಾಗೆ 2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ. ಈಗಲೂ ನಾನು ಅದನ್ನೇ ಹೇಳುತ್ತೇನೆ. ಜೊತೆಗೆ ಈ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ದೊಡ್ಡ ಪಕ್ಷಗಳ ಹಣ ಹಂಚಿಕೆ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಆರೋಪಿಸಿದರು.

ಚುನಾವಣೆ ಎಂದರೆ ಸೋಲು-ಗೆಲುವು ಸಹಜ. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಇನ್ನೂ ಮುಂದೆ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದಿಗೂ ಧೃತಿಗೆಡುವುದಿಲ್ಲ ಎಂದು ಅಭಿಮತ ವ್ಯಕ್ತಪಡಿಸಿದರು

ಈ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿದ್ದರು. ಆದ್ದರಿಂದ ಜೆಡಿಎಸ್ ಸೋಲು ಅನುಭವಿಸಿದೆ. ಆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರೇ ನೇರವಾಗಿ ಹಕ್ಕು ಚಲಾಯಿಸುವುದರಿಂದ ಜೆಡಿಎಸ್ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಜನರಲ್ಲಿ ಜೆಡಿಎಸ್ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದ ಅವರು ಜಯ ಗಳಿಸಿದ ಎಲ್ಲ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದರು

 

 

Related posts

ಗಜೇಂದ್ರಗಡದಲ್ಲಿ ಸಂವಿಧಾನ ಜಾಗೃತಿ ಅಭಿಯಾನ ಸಾಮಾಜಿಕ ಬದಲಾವಣೆಗಳ ಹಿಂದೆ ಸಂವಿಧಾನದ ಪಾತ್ರ ಮಹತ್ವದ್ದು

satyadarshana

ಸೆಪ್ಟೆಂಬರ್ 5ರಿಂದ ಮನೆ ಬಾಗಿಲಿಗೆ ‘ಪ್ರಜಾಸೇವೆ’: ಸಾರ್ವಜನಿಕರ ಕುಂದುಕೊರತೆಗಳ ತ್ವರಿತ ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಟ್ಟುನಿಟ್ಟಿನ ಸೂಚನೆ

satyadarshana

ವಿದ್ಯಾರ್ಥಿ ಚೇತನ ಜೀವನ ಶೈಲಿ ಪಾಠ ವಿಶೇಷ ಹಾಗೂ ವಿನೂತನ ಕಾರ್ಯಕ್ರಮ.

satyadarshana

Leave a Comment