Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ವೇಳೆ ಮಾರಾಮಾರಿ –

ಬೆಂಗಳೂರು: ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನವಾದ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದರೆ ಇತ್ತ ಮಾಕ್ರ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ.

ಪ್ರತಿಭಟನೆ ವೇಳೆ ಎಬಿವಿಪಿ ವಿದ್ಯಾರ್ಥಿಗಳೊಂದಿಗೆ ಸಂಶೋಧನಾ ವಿದ್ಯಾರ್ಥಿಗಳು ವಾಗ್ವಾದ ಇಳಿದಿದ್ದು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ವಿಚಾರವೇ ದೊಡ್ಡದು. ದೇಶಕ್ಕಾಗಿ ನೀವು ಬರುವುದಿಲ್ಲ ಮಾಕ್ರ್ಸ್ ಕಾರ್ಡ್, ಫಲಿತಾಂಶ ತಡವಾಗುವುದು ಇದೆಲ್ಲ ಮಾಮೂಲಿಯಾಗಿದೆ. ಇವತ್ತು ನಮ್ಮ ಪ್ರತಿಭಟನೆ ಇದೆ. ನೀವು ನಾಳೆ ಬನ್ನಿ ಅಂತ ಹೇಳಿದ್ದಾರೆ

ಗಲಾಟೆ ವೇಳೆ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಸಂಶೋಧನಾ ವಿವಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳು, ಮನ ಬಂದಂತೆ ತಮ್ಮ ಸ್ನೇಹಿತರನ್ನ ಹಾಸ್ಟೆಲ್‍ನಲ್ಲಿ ಉಳಿಸಿಕೊಳ್ಳುತ್ತಿದ್ದರು. ಇದರಿಂದ ಉಳಿದ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗುತ್ತಿತ್ತು. ಕೆಲ ಸಂಶೋಧನಾ ವಿದ್ಯಾರ್ಥಿಗಳು ಇದನ್ನು ಪ್ರಶ್ನೆ ಮಾಡಿದರೆ ನೀವು ಜೂನಿಯರಗಳು ಅಂತ ದರ್ಪ ಮಾಡುತ್ತಿದ್ದಾರೆ ಎಂದು ಎಬಿವಿಪಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈ ವೇಳೆ ಎರಡೂ ವಿದ್ಯಾರ್ಥಿ ಸಂಘಟನೆಗಳ ಸದಸ್ಯರ ವಾಗ್ವಾದ ನಡೆದು ಜಗಳ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಈ ಕುರಿತು ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯುತ್ತಿದೆ. ಆದರೆ ಇಂದು ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾದ ವೇಳೆ ಗಲಾಟೆ ನಡೆದಿದೆ.

 

 

 

Related posts

ಪಂಚರಾಜ್ಯ ಚುನಾವಣೆಗೆ ದಿನಾಂಕ ಫಿಕ್ಸ್, ಭೌತಿಕ ರ‍್ಯಾಲಿ, ರೋಡ್ ಶೋ ನಿಷೇಧ.

satyadarshana

ಉತ್ತರ ಕರ್ನಾಟಕದಲ್ಲೊಂದು ಲವ್ ಧೋಕಾ.

satyadarshana

ವಿಧಾನಸಭಾ ಚುನಾವಣೆ: ಕೊಪ್ಪಳ ಜಿಲ್ಲೆಯಲ್ಲಿ 601 ಅಬಕಾರಿ ಪ್ರಕರಣಗಳು ದಾಖಲು.

satyadarshana

Leave a Comment