ಬೆಂಗಳೂರು: ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್(84) ವಿಧಿವಶರಾಗಿದ್ಧಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಾರ್ಗವಿ ನಾರಾಯಣ್ ಅವರು ಇಂದು ಸಂಜೆ 7.30 ಕ್ಕೆ ಮೃತಪಟ್ಟಿದ್ದಾರೆ.
ಅವರ ಮಕ್ಕಳಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ, ಮೊಮ್ಮಗಳು ಸಂಯುಕ್ತ ಬೆಳವಾಡಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಭಾರ್ಗವಿ ನಾರಾಯಣ್ ಅವರು 20 ಕ್ಕೂ ಪಲ್ಲವಿ, ಕಾಡ ಬೆಳದಿಂಗಳು, ರಾಜಕುಮಾರ ಸೇರಿದಂತೆ 20 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಭಾರ್ಗವಿ ನಾರಾಯಣ್ ಅವರ ಆತ್ಮಕಥೆ ‘ನಾನು ಭಾರ್ಗವಿ’ 2012 ರಲ್ಲಿ ಬಿಡುಗಡೆಯಾಗಿತ್ತು. ಅವರಿಗೆ ಅತ್ಯುತ್ತಮ ಪೋಷಕ ನಟಿ, ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ, ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.
