ಗದಗ: (18. ಮೇ ) ರಂದು ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್ ಡಿ ದೇವೇಗೌಡರ ಜನ್ಮದಿನವನ್ನು ಗಜೇಂದ್ರಗಡ ತಾಲ್ಲೂಕ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ತಾಲ್ಲೂಕ ಅಧ್ಯಕ್ಷರಾದ ಎಮ್ ವಾಯ್ ಮುಧೋಳ (ಸಾಗರ್) ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ದೇವೇಗೌಡರ ಸಾಧನೆ ಮತ್ತು ಕಾರ್ಯವೈಖರಿಯನ್ನು ಹಾಗೂ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ವಿವಿಧ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷ, ಜಾತಿ, ಧರ್ಮದ ಭೇದಭಾವ ನಮಗಿಲ್ಲ| ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ| ಪ್ರಗತಿ ಕಾರ್ಯಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಮಾರ್ಗದರ್ಶನ ನೀಡಿದರೂ ಸಹ ಅದನ್ನು ಸ್ವೀಕರಿಸುತ್ತೇನೆ| ರಾಜಕೀಯ ಕೇವಲ ಚುನಾವಣೆಗೆ ಮಾತ್ರ ಸೀಮಿತ:ಎಮ್ ವಾಯ್ ಮುಧೋಳ (ಸಾಗರ್) ಹೇಳಿದರು ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಾಗೊಮ್ಮೆ ಪ್ರಗತಿಯ ಹೊಳೆ ಹರಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆ, ಮಹಿಳಾ ಮೀಸಲಾತಿ, ಸಾಲ ಮನ್ನಾ, ಜನತಾ ದರ್ಶನ ನಮ್ಮ ಪಕ್ಷದ ಮಹಾತ್ವಾಕಾಂಕ್ಷೆಯ ಯೋಜನೆಗಳಾಗಿವೆ ಎಂದರು.
ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
