Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಪಿಎಸ್ಐ ನೇಮಕಾತಿ ಮರು ಪರೀಕ್ಷೆ ರದ್ದತಿಗೆ ಆಗ್ರಹ:500ಕ್ಕೂ ಹೆಚ್ಚು ಪಿಎಸ್‌ಐ ಆಕಾಂಕ್ಷಿಗಳು ಮೂರು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಬೆಂಗಳೂರು;  ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಪಾಲ್ಗೊಂಡಿದ್ದರು. ಸಮತಾ ಸೈನಿಕ ದಳ ಪದಾಧಿಕಾರಿಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದರು.ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಆದೇಶ ಹಿಂಪಡೆಯಬೇಕು ಹಾಗೂ ಪ್ರಾಮಾಮಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನೀಡಬೇಕೆಂದು ಒತ್ತಾಯಿಸಿ ಶನಿವಾರ ನೂರಾರು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಅವ್ಯವಹಾರ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆಗೆ ಆದೇಶ ನೀಡಿತ್ತು. ಇದಕ್ಕೆ ಆಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

300ಕ್ಕೂ ಹೆಚ್ಚು ಪ್ರತಿಭಟನಾಕಾರರು ಸ್ಥಳದಲ್ಲಿ ಜಮಾಯಿಸಿದ್ದು, ಮಧ್ಯಾಹ್ನ 3ರವರೆಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆಪ್ರತಿಭಟನಾಕಾರರಲ್ಲಿ ಒಬ್ಬರಾದ ದಿನೇಶ್ ಕುಮಾರ್ ಎಂಬುವವರು ಮಾತನಾಡಿ, ರಾಜಕಾರಣಿ ಬಿ ಟಿ ಲಲಿತಾ ನಾಯ್ಕ್ ಮತ್ತು ಸಮತಾ ಸೈನಿಕ ದಳದ ಅಧ್ಯಕ್ಷ ವೆಂಕಟಸ್ವಾಮಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 500ಕ್ಕೂ ಹೆಚ್ಚು ಪಿಎಸ್‌ಐ ಆಕಾಂಕ್ಷಿಗಳು ಮೂರು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಮರುಪರೀಕ್ಷೆಯನ್ನು ರದ್ದುಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.

ಪ್ರತಿಭಟನಾಕಾರರನ್ನು ಭೇಟಿಯಾದ ಸಿಎಂ

ಈ ನಡುವೆ ಪ್ರತಿಭಟನಾನಿರತನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೇಟಿ ಮಾಡಿದ್ದು, ಸಿಐಡಿ ತನಿಖೆ ಪೂರ್ಣಗೊಳಿಸಿದ ಬಳಿಕ ಅಂತಿಮವಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

Related posts

ಬಾಬಾ ಸಾಹೇಬರ ಕಳೆದುಕೊಂಡ ಭಾರತ ಅನಾಥವಾಗಿದೆ: ಮಂಜು ಬುರುಡಿ

satyadarshana

ಬೆಳ್ಳಂಬೆಳಗ್ಗೆ ಗದಗ, ಹಡಗಲಿ, ಹಾವೇರಿ ಸೇರಿ 6 ಕಡೆಗಳಲ್ಲಿ ದಾಳಿ

satyadarshana

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ನಿವಾಸಕ್ಕೆ ಮುತ್ತಿಗೆ ಹಾಕಿ.ಭಾರಿ ಹಣ ವಶಕ್ಕೆ ಪಡೆದ ಪ್ರತಿಭಟನಾಕಾರರು

satyadarshana

Leave a Comment