Satya Darshana
ಬಿಸಿ ಬಿಸಿ ಸುದ್ದಿ
Otherಕ್ರೀಡೆ

ಭಾರತಕ್ಕೆ 48 ರನ್‌ಗಳ ಭರ್ಜರಿ ಜಯ :ಋತುರಾಜ್‌ ಗಾಯಕ್ವಾಡ್‌  ಇಶಾನ್‌ ಶೈನ್‌, ಹರ್ಷಲ್‌ ಬೌಲಿಂಗ್‌ ಕಮಾಲ್‌.

ಮುಂಬೈ:- (ಜೂನ್ 14 ).ಋತುರಾಜ್‌ ಗಾಯಕ್ವಾಡ್‌ ಹಾಗೂ ಇಶಾನ್‌ ಕಿಶನ್‌ ಅಮೋಘ ಅರ್ಧ ಶತಕಗಳ ಅಬ್ಬರ ಹಾಗೂ ಯಜುವೇಂದ್ರ ಚಾಹಲ್‌, ಹರ್ಷಲ್‌ ಪಟೇಲ್‌ ಅವರ ಬೌಲಿಂಗ್‌ ಕಮಾಲ್‌ ನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 48 ರನ್‌ಗಳ ಭರ್ಜರಿ ಜಯ ಸಾಧಿಸಿತು.

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 3ನೇ T20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 5 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿ, ಎದುರಾಳಿ ತಂಡಕ್ಕೆ 180 ರನ್‌ಗಳ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು 19.1 ಓವರ್‌ಗಳಲ್ಲೇ 131 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಭಾರತಕ್ಕೆ ಮಂಡಿಯೂರಿತು.

ಗಾಯಕ್ವಾಡ್‌ ಇಶಾನ್‌ ಶೈನ್‌: ಟೀಮ್ ಇಂಡಿಯಾಕ್ಕೆ ಆರಂಭಿಕರಾದ ಗಾಯಕವಾಡ್ ಹಾಗೂ ಇಶಾನ್ ಭದ್ರ ಬುನಾದಿ ಹಾಕಿಕೊಟ್ಟರು. ಕಳೆದ 2 ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಗಾಯಕ್ವಾಡ್‌ ಇಂದಿನ ಪಂದ್ಯದಲ್ಲಿ ಆರಂಭದಿಂದಲೇ ಅತಿಥೇಯ ತಂಡದ ಬೌಲರ್‌ಗಳ ಬೆವರಿಳಿಸಿದರು. ಗಾಯಕ್ವಾಡ್‌ 34 ಎಸೆತಗಳಲ್ಲಿ 57 ರನ್‌ ಚಚ್ಚಿ 57 ರನ್ (7 ಬೌಂಡರಿ, 2 ಸಿಕ್ಸರ್‌) ಗಳಿಸಿ ತಮ್ಮ 35ನೇ ಎಸೆತದಲ್ಲಿ ಮಹಾರಾಜ್‌ಗೆ ವಿಕೆಟ್ ಒಪ್ಪಿಸಿದರು.

ಇದೇ ವೇಳೆ ಆರಂಭಿಕನಾಗಿ ಕಣಕ್ಕಿಳಿದಿದ್ದ ಇಶಾನ್‌ ಕಿಶನ್‌ ಸಹ 35 ಎಸೆತಗಳಲ್ಲಿ 54 ರನ್‌ (2 ಸಿಕ್ಸರ್‌, 5 ಬೌಂಡರಿ) ಪೇರಿಸಿದರು. ಇಬ್ಬರ ಸಾಂಘಿಕ ಬ್ಯಾಟಿಂಗ್‌ ಪ್ರರ್ಶನದಿಂದ ಟೀಂ ಇಂಡಿಯಾ 180 ರನ್‌ ಗುರಿ ನೀಡಲು ಸಾಧ್ಯವಾಯಿತು.

ನಿಗದಿತ 20 ಓವರ್‌ಗಳಲ್ಲಿ ಟೀಂ ಇಂಡಿಯಾ 200 ರನ್‌ಗಳ ಗುರಿ ತಲುಪುವ ನಿರೀಕ್ಷೆಯಿತ್ತು. ಆದರೆ ನಂತರ ಕ್ರಮಾಂಕದಲ್ಲಿ ಬಂದ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಲಿಲ್ಲ. ಶ್ರೇಯಸ್‌ ಅಯ್ಯರ್‌ 14 ರನ್‌, ರಿಷಭ್‌ ಪಂತ್‌ 6 ರನ್‌ ದಿನೇಶ್‌ ಕಾರ್ತಿಕ್‌ 6 ರನ್‌ ಗಳಿಸಿದರೆ ಅಕ್ಷರ್‌ ಪಟೇಲ್‌ ಸಹ 6 ರನ್‌ಗಳಿಸಿ ಅಜೇಯರಾಗುಳಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹಾರ್ದಿಕ್‌ ಪಾಂಡ್ಯ 21 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 31 ರನ್‌ ಸಿಡಿಸಿ ಅಜೇಯರಾಗುಳಿದರು.

ಚಾಹಲ್‌, ಪಟೇಲ್‌ ಬೌಲಿಂಗ್‌ ಕಮಾಲ್‌: ತಮ್ಮ ಬೌಲಿಂಗ್‌ ದಾಳಿಯಿಂದ ದಕ್ಷಿಣ ಆಫ್ರಿಕಾದ ಪ್ರಮುಖ ಬ್ಯಾಟರ್‌ಗಳನ್ನು ಉರುಳಿಸುವಲ್ಲಿ ಯಜುವೇಂದ್ರ ಚಾಹಲ್‌ ಹಾಗೂ ಹರ್ಷಲ್‌ ಪಟೇಲ್‌ ಯಶಸ್ವಿಯಾದರು. ಚಾಹಲ್‌ 4 ಓವರ್‌ಗಳಲ್ಲಿ 20 ರನ್ ನೀಡಿ 3 ವಿಕೆಟ್‌ ಪಡೆದರೆ, ಹರ್ಷಲ್‌ ಪಟೇಲ್‌ 3.1 ಓವರ್‌ನಲ್ಲಿ 25 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆದರು. ಇದು ಟೀಂ ಇಂಡಿಯಾ ಗೆಲುವಿಗೆ ಸಹಕಾರಿಯಾಯ್ತು. ಅಕ್ಷರ್‌ ಪಟೇಲ್‌ 1 ವಿಕೆಟ್‌ ಪಡೆದರು.

 

 

 

 

Related posts

ತೆಲುಗು ಟೈಟಾನ್ಸ್ ವಿರುದ್ಧ ಗೆಲುವು ಕಂಡ ಬುಲ್ಸ್ ಕಳೆದ ಮೂರು ಪಂದ್ಯಗಳಲ್ಲಿ ಸೋಲಿನ ಫಲಿತಾಂಶ ಕಂಡಿತ್ತು ಬೆಂಗಳೂರು

satyadarshana

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ

satyadarshana

ವಿಧಾನಪರಿಷತ್ ಚುನಾವಣೆಗೆ ಕಣಕ್ಕಿಳಿಸಲು ಆಗ್ರಹ

satyadarshana