Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿ

ಹುಬ್ಬಳ್ಳಿ (ಜುಲೈ 5): ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. “ಜುಲೈ 2 ರಂದು ಹೋಟೆಲ್‌ಗೆ ಆಗಮಿಸಿದ್ದ ಚಂದ್ರಶೇಖರ್‌ ಗುರೂಜಿ ನಾಳೆ ಹೋಟೆಲ್‌ ರೂಮ್‌ ಖಾಲಿ ಮಾಡಬೇಕಿತ್ತು. ಇಂದು ಬೆಳಗ್ಗೆ ರಿಶಪ್ಶನ್‌ನಲ್ಲಿ ಕುಳಿತಿದ್ದ ವೇಳೆ ಬಂದ ದುಷ್ಕರ್ಮಿಗಳು ಕಾಲಿಗೆ ನಮಸ್ಕಾರ ಮಾಡುವಂತೆ ನಟಿಸಿ ಅವರಿಗೆ ಚಾಕು ಇರಿದಿದ್ದಾರೆ’ ಎಂದು ಹೋಟೆಲ್‌ ಸಿಬ್ಬಂದಿ ತಿಳಿಸಿದ್ದಾರೆ.

ಸಿಜಿ ಪರಿವಾರ್‌ ಗ್ಲೋಬಲ್‌ ವಿಷನ್‌ನ ಚೇರ್ಮನ್‌ ಕೂಡ ಆಗಿದ್ದ ಚಂದ್ರಶೇಖರ್ ಗುರೂಜಿ 2016ರಲ್ಲಿ ಸರಳ ಜೀವನ ಎಂಬ ಇನ್ಫೋ ಎಂಟರ್‌ಟೇನ್‌ಮೆಂಟ್‌ ಟಿವಿ ಚಾನೆಲ್‌ ಅನ್ನು ಪ್ರಾರಂಭಿಸಲಾಯಿತು. ಚಂದ್ರಶೇಖರ ಗುರೂಜಿಯವರು 2002 ರಲ್ಲಿ ಸಿಜಿ ಪರಿವಾರ್ ಎಂಬ ಖಾಸಗಿ ಕಂಪನಿಯನ್ನು ಆರಂಭಿಸಿದ್ದರು. ಆ ಮೂಲಕ 350 ಕ್ಕೂ ಹೆಚ್ಚು ಶಿಷ್ಯರು ಮತ್ತು ಅನುಯಾಯಿಗಳೊಂದಿಗೆ ಸರಳ ವಾಸ್ತು ವಿಚಾರವನ್ನು ಹಂಚಿಕೊಳ್ಳಲು ಪ್ರಾರಂಭಿಸಿದರು.

ಪೊಲೀಸರ ಮಾಹಿತಿ ಪ್ರಕಾರ, ಚಂದ್ರಶೇಖರ್ ಗುರೂಜಿಗೆ 60ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಿದ್ದಾರೆ. ತೀವ್ರತೆಯನ್ನು ನೋಡಿದರೆ, ವೈಯಕ್ತಿಕ ವೈಷಮ್ಯದಿಂದಲೇ ಈ ಕೊಲೆ ಮಾಡಿರುವ ಸಾಧ್ಯತೆಯಿದೆ. ವೈಯಕ್ತಿಕ ದ್ವೇಷವಿದ್ದಾಗ ವ್ಯಕ್ತಿ ಒಳಗಿರುವ ಎಲ್ಲಾ ಸಿಟ್ಟನ್ನು ಈ ರೀತಿ ಹೊರ ಹಾಕಿರುವ ಸಾವಿರಾರು ಪ್ರಕರಣಗಳು ನಮ್ಮ ಕಣ್ಣಮುಂದಿವೆ.

 

Related posts

ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ: ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ಆತಂಕ -ಸಾಮಾನ್ಯ ಜನರ ರಕ್ಷಣೆ ಹೇಗೆ ಸಾಧ್ಯ

satyadarshana

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ .

satyadarshana

ಜಾನುವಾರು ಜಾತ್ರೆ , ಸಾಗಾಣಿಕೆ ನಿಷೇಧ.

satyadarshana