ಕೊಪ್ಪಳ. ಅಂಗನವಾಡಿ ನೌಕರರಿಗೆ ಶಾಸನಬದ್ಧ ಸವಲತ್ತುಗಳನ್ನು ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಜಿಲ್ಲಾ ಸಮಿತಿ ಸದಸ್ಯರು ಸೋಮವಾರ ನಗರದ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದರು.
‘ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿ ನೀಡಬೇಕು, ವೇತನ ಹೆಚ್ಚಿಸಬೇಕು, ಐಸಿಡಿಎಸ್ ಯೋಜನೆಗೆ ಅಗತ್ಯ ಅನುದಾನ ಮತ್ತು ಬಲಿಷ್ಠ ಪಡಿಸಲು ನೌಕರರಿಗೆ ಸವಲತ್ತುಗಳನ್ನು ಒದಗಿಸಬೇಕು. ಇಂದಿಗೂ ಮೂರ್ನಾಲ್ಕು ತಿಂಗಳಿಗೊಮ್ಮೆ ವೇತನ ಪಾವತಿ ಮಾಡಲಾಗುತ್ತಿದೆ. ಇದರಿಂದ ಜೀವನ ನಿರ್ವಹಣೆಯೂ ಕಷ್ಟವಾಗುತ್ತಿದೆ. ಆದ್ದರಿಂದ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಸದಸ್ಯರು ಆಗ್ರಹಿಸಿದರು.
‘ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗಿದ್ದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದರೂ ಸರ್ಕಾರ ನಮ್ಮ ಕೆಲಸವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಆದ್ದರಿಂದ ಜು. 26ರಂದು ಸಂಸತ್ತಿನ ಎದುರು ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಅದರ ಭಾಗವಾಗಿ ಇಲ್ಲಿ ಪ್ರತಿಭಟನೆ ನಡೆಸಲಾಯಿತು’ ಎಂದು ಸಮಿತಿ ಸದಸ್ಯರು ತಿಳಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಜಾ ದರೋಜಿ, ಖಜಾಂಚಿ ಲಲಿತಾ ಅರಳಿ, ಅನ್ನಪೂರ್ಣ ಬ್ರಹ್ಮನಮಠ, ಶಿವಲೀಲಾ ಅರಳಿ, ಕೊಟ್ರಮ್ಮ ಗೊರ್ತಿಕೊಪ್ಪ, ಅಂಬ್ರಮ್ಮ ಬಿ., ಅನಸೂಯಾ ಸಿದ್ದಾಪುರ, ಲಕ್ಷ್ಮಿ ಸಜ್ಜನ, ಸಾವಿತ್ರಿ ಜೋಶಿ, ದುರಗಮ್ಮ, ಮಾಂತಮ್ಮ, ಪಾರ್ವತಿ, ಬಸಪ್ಪ, ಉಮಾ ಹಾಗೂ ಕಲಾವತಿ ಸೇರಿದಂತೆ
