ಗದಗ : ಸೆಪ್ಟೆಂಬರ್ 6: ಗದಗ ಬೆಟಗೇರಿ ಅವಳಿ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಾವೃತವಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೋಮವಾರ ರಾತ್ರಿ 11 ಗಂಟೆಗೆ ಭೇಟಿ ನೀಡಿ ಪರಿಶೀಲನ ನಡೆಸಿದರು.
ಬೆಟಗೇರಿಯ ಮಂಜುನಾಥ ಬಡಾವಣೆ ಸೇರಿದಂತೆ ವಿವಿಧೆಡೆ ಜಲಾವೃತ ಪ್ರದೇಶಗಳನ್ನು ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಸ್ಥಿತಿ ನಿರ್ವಹಣೆಗೆ ಅಗತ್ಯದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಗದಗ -ಬೆಟಗೇರಿಯ ನಗರಸಭೆ ಅಧ್ಯಕ್ಷೆ ಉಷಾ ದಾಸರ ಸೇರಿದಂತೆ ನಗರಸಭೆಯ ಸದಸ್ಯರು, ಅಧಿಕಾರಿಗಳು , ಪೊಲೀಸ ಇಲಾಖೆ ಅಧಿಕಾರಿಗಳು ಹಾಜರಿದ್ದರು.