Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷ ಡಿಪ್ಲೋಮಾ ಕೋರ್ಸಗೆ ಅರ್ಜಿ ಆಹ್ವಾನ.

ಗದಗ  : ( ಸತ್ಯದರ್ಶನ ) ಸೆಪ್ಟೆಂಬರ್ 8: ಕರ್ನಾಟಕ ಕೈಮಗ್ಗ        ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಇಲ್ಲಿ 3 ವರ್ಷಗಳ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಪದವಿತರಗತಿಯನ್ನು ನಡೆಸುತ್ತಿದ್ದು 2022-23 ನೇ ಸಾಲಿಗಾಗಿ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ.
        ಸೆಪ್ಟೆಂಬರ್ 30 ರೊಳಗಾಗಿ ದಾಖಲಾತಿಗಳೊಂದಿಗೆ ಪ್ರವೇಶ ಪಡೆಯಬಹುದಾಗಿದೆ.
ಪ್ರವೇಶ ಪಡೆಯುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ದಿನಾಂಕ: 01-07-2022 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು.
ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ಶಿಷ್ಯವೇತನ ನೀಡಲಾಗುವುದು.
ಬಾಲಕರ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಬಾಲಕಿಯರಿಗೆ ವಸತಿ ನಿಲಯದ ಸೌಲಭ್ಯವಿರುವುದಿಲ್ಲ.
3 ವರ್ಷಗಳ ವ್ಯಾಸಂಗದ ನಂತರ ಅಭ್ಯರ್ಥಿಗಳಿಗೆ ಜವಳಿ ಹಾಗೂ ಗಾರ್ಮೆಂಟ್ಸ್ ಉದ್ಯಮದಲ್ಲಿ ಉದ್ಯೋಗ ಅವಕಾಶಗಳು ಲಭಿಸುತ್ತವೆ.
ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ: 08372-297221 ಮೊಬೈಲ್ ಸಂಖ್ಯೆ: 9448644074 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

Related posts

ಕನಸುಗಳನ್ನು ಸಾಕಾರಗೊಳಿಸಿ ಕಂಗೊಳಿಸಿದ ಡಾ|ಅಭಿನವ ಅನ್ನದಾನ ಮಹಾಸ್ವಾಮೀಜಿ ಧರ್ಮದ ಜ್ಯೋತಿ ಬೆಳಗಿಸಿ ಕತ್ತಲೆಯ ಲೋಕಕ್ಕೆ ಪಯಣ.

satyadarshana

“ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ”  

satyadarshana

ಕರ ಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಆರ್‌ಓ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿಗಳು

satyadarshana

Leave a Comment