Satya Darshana
ಬಿಸಿ ಬಿಸಿ ಸುದ್ದಿ
Otherಜಿಲ್ಲೆ

ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ.

ಗದಗ: ( ಸತ್ಯದರ್ಶನ) ಸೆಪ್ಟೆಂಬರ್ 8: 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.
     ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಬಯಸುವ ಫಲಾಪೇಕ್ಷಿಗಳು ಅಕ್ಟೋಬರ್ 20 ರವರೆಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು.
           ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ/ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು ಹಾಲಿ ಜಮೀನುಗಳು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
      ಅರ್ಜಿದಾರರು 18 ರಿಂದ 60 ವರ್ಷಗಳ ಮಿತಿಯೊಳಗಿರಬೇಕು. https://www.dbcdc.karnataka.gov.in ವೆಬ್‍ಸೈಟ್‍ನಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ. ನಿಗಮದ ಸಹಾಯವಾಣಿ ಸಂಖ್ಯೆ: 08372-232327 ಹಾಗೂ 080-22374832, ಆನ್‍ಲೈನ ಮುಖಾಂತರ ಸಲ್ಲಿಸಲಾದ ಅರ್ಜಿಯನ್ನು ನಿಗದಿತ ದಾಖಲಾತಿಗಳೊಂದಿಗೆ ಲಗತ್ತಿಸಿ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೂ.ನಂ: 202, 2ನೇ ಮಹಡಿ, ಜಿಲ್ಲಾ ಆಡಳಿತ ಭವನ, ಗದಗ ಇಲ್ಲಿ ಅಕ್ಟೋಬರ್ 20 ರೊಳಗೆ ಸಲ್ಲಿಸಬಹುದಾಗಿದೆ.

Related posts

ಪರಿವರ್ತನಾ ಯುಗದ ಪ್ರತಿ ಮೂರ್ತಿಗಳು 

satyadarshana

ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿ

satyadarshana

ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂದಲ್ಲಿ ಕೋಟಿ ಕಂಠ ಗಾಯನದ ತಾಲೀಮು

satyadarshana

Leave a Comment